Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ

IPPB Recruitment 2024: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ BCA, B.Sc, BE. ಅಥವಾ B.Tech, MCA ಪದವಿ ಪಡೆದಿರಬೇಕು. ಜೊತೆಗೆ ಕಡ್ಡಾಯವಾಗಿ 1-6 ವರ್ಷದವರೆಗೆ ಅನುಭವ ಹೊಂದಿರಬೇಕು.

Written by - Puttaraj K Alur | Last Updated : May 18, 2024, 11:23 PM IST
  • ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿಯಿರುವ ಹುದ್ದೆಗಳ ನೇಮಕಾತಿ
  • 54 ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸಲು ಇದೇ ಮೇ 24 ಕೊನೆಯ ದಿನವಾಗಿರುತ್ತದೆ
Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ title=
IPPB Recruitment 2024

IPPB Recruitment 2024: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 54 ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಸಿಎ, ಬಿಎಸ್‌ಸಿ ಓದಿದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 24 ಕೊನೆಯ ದಿನವಾಗಿರುತ್ತದೆ.  

ಉದ್ಯೋಗದ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಚೆನ್ನೈ, ಮುಂಬೈ ಮತ್ತು ದೆಹಲಿಯಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ. 

ಇದನ್ನೂ ಓದಿ: Daily GK Quiz: ಅತಿಹೆಚ್ಚು ಫುಟ್ಬಾಲ್ ವಿಶ್ವಕಪ್ ಗೆದ್ದ ದೇಶ ಯಾವುದು?‌

ವಿದ್ಯಾರ್ಹತೆ: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಇದರ ಜೊತೆಗೆ ಕಡ್ಡಾಯವಾಗಿ 1-6 ವರ್ಷದವರೆಗೆ ಅನುಭವ ಹೊಂದಿರಬೇಕು.

ಹುದ್ದೆಗಳ ವಿವರ: 28 ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍), 21 ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) ಮತ್ತು 5 ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ ಹುದ್ದೆಗಳು ಖಾಲಿ ಇವೆ. 

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ. 

ಅರ್ಜಿ ಶುಲ್ಕ: ಅರ್ಜಿ ಶುಲ್ಕವಾಗಿ SC/ST/PWD ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.   

ಆಯ್ಕೆ ವಿಧಾನ: ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 

ಮಾಸಿಕ ವೇತನ: ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.  ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಇದನ್ನೂ ಓದಿ: Daily GK Quiz: ಯಾವ ನಗರವನ್ನು ಮುತ್ತಿನ ನಗರಿ ಎಂದು ಕರೆಯಲಾಗುತ್ತದೆ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News