Job Alert: ‘ಅರಣ್ಯ ವೀಕ್ಷಕ’ರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Forest Watcher Recruitment 2023: ಶಿವಮೊಗ್ಗ ಪ್ರಾದೇಶಿಕ ವಿಭಾಗದಲ್ಲಿ 8, ಭದ್ರಾವತಿಯಲ್ಲಿ 8, ಸಾಗರದಲ್ಲಿ 6, ಶಿವಮೊಗ್ಗ ವನ್ಯಜೀವಿ ವಿಭಾಗದಲ್ಲಿ 8 ಸೇರಿ ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ಶಿವಮೊಗ್ಗ ವೃತ್ತದಲ್ಲಿ ಖಾಲಿ ಇರುವ 30 ಅರಣ್ಯ ವೀಕ್ಷಕರ ಗ್ರೂಪ್ ‘ಡಿ’ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಈ ಸಂಬಂಧ ಅರಣ್ಯ ಇಲಾಖೆಯಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, 2023-24ನೇ ಸಾಲಿನಲ್ಲಿ ಶಿವಮೊಗ್ಗ ಅರಣ್ಯ ವೃತ್ತದಲ್ಲಿ ಖಾಲಿ ಇರುವ 30 ಅರಣ್ಯ ವೀಕ್ಷಕರ ಗ್ರೂಪ್ ‘ಡಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in ಜಾಲತಾಣಕ್ಕೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕವಷ್ಟೇ ಅರ್ಜಿಗಳನ್ನು ಸಲ್ಲಿಸಬೇಕು. ಬೇರೆ ಯಾವುದೇ ರೀತಿ ಅರ್ಜಿ ಸಲ್ಲಿಸುವಂತಿಲ್ಲ. ಅಧಿಸೂಚನೆಯಲ್ಲಿನ ಸೂಚನೆ, ನಿರ್ದೇಶನ ಹಾಗೂ ಷರತ್ತುಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಬಿಟ್ಟು, ಪರಿಹಾರಕ್ಕಾಗಿ ಕೇಂದ್ರದ ಮೇಲೆ ಒತ್ತಡ ತರಲಿ : ಡಿಸಿಎಂ
ಪ್ರಮುಖ ದಿನಾಂಕಗಳು: ಈ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಸೆ.27ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ಅ.26 ಆಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನಾಂಕ ಅ.31 ಕೊನೆ ದಿನವಾಗಿರುತ್ತದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ 2A, 2B, 3A, 3B ಪ್ರವರ್ಗದ ಅಭ್ಯರ್ಥಿಗಳಿಗೆ 200 ರೂ. ಮತ್ತು 20 ರೂ. ಸೇವಾ ಶುಲ್ಕ ನಿಗದಿಪಡಿಸಲಾಗಿದೆ. SC/ST ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಹಾಗೂ ಸೇವಾ ಶುಲ್ಕ 20 ರೂ. ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 18,600 ರಿಂದ 32,600 ರೂ. ವೇತನ ನೀಡಲಾಗುತ್ತದೆ.
ವಿಭಾಗವಾರು ಹುದ್ದೆಗಳ ವಿವರ: ಶಿವಮೊಗ್ಗ ಪ್ರಾದೇಶಿಕ ವಿಭಾಗದಲ್ಲಿ 8, ಭದ್ರಾವತಿಯಲ್ಲಿ 8, ಸಾಗರದಲ್ಲಿ 6, ಶಿವಮೊಗ್ಗ ವನ್ಯಜೀವಿ ವಿಭಾಗದಲ್ಲಿ 8 ಸೇರಿ ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅರಣ್ಯ ವೀಕ್ಷಕರ ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು SSLCಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷವಾಗಿದೆ. 2A, 2B, 3A, 3B ವರ್ಗದವರಿಗೆ 32 ವರ್ಷ. SC/ST ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 33 ವರ್ಷವಾಗಿದೆ. ಮಾಜಿ ಸೈನಿಕರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ ಆರೋಪ
ಆಯ್ಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಮಾಹಿತಿ, ವಿವರಗಳ ಆಧಾರಗಳನ್ವಯ ಆಯ್ಕೆ ಪ್ರಾಧಿಕಾರವು SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ದೈಹಿಕ ಮತ್ತು ದೈಹಿಕ ಸಮರ್ಥತೆ ಪರೀಕ್ಷೆಗೆ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ದೈಹಿಕ ಮತ್ತು ದೈಹಿಕ ಸಮರ್ಥತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.