Job Alert: ರೈಲ್ವೆ ಇಲಾಖೆ ನೇಮಕಾತಿ, 9,000 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

RRB Recruitment 2024: ದೇಶದಾದ್ಯಂತ ಖಾಲಿ ಇರುವ 9,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1,100 ಟೆಕ್ನಿಷಿಯನ್‌ ಗ್ರೇಡ್‌-I ಸಿಗ್ನಲ್‌ ಹುದ್ದೆ ಮತ್ತು 7,900 ಟೆಕ್ನಿಷಿಯನ್‌ ಗ್ರೇಡ್‌-III ಸಿಗ್ನಲ್‌ ಹುದ್ದೆಗಳು ಖಾಲಿ ಇವೆ.

Written by - Puttaraj K Alur | Last Updated : Apr 7, 2024, 11:26 PM IST
  • ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಿಂದ ನೇಮಕಾತಿ
  • ದೇಶದಾದ್ಯಂತ ಖಾಲಿ ಇರುವ 9,000 ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನ
  • 1,100 ಟೆಕ್ನಿಷಿಯನ್‌ ಗ್ರೇಡ್‌-I ಸಿಗ್ನಲ್‌ & 7,900 ಟೆಕ್ನಿಷಿಯನ್‌ ಗ್ರೇಡ್‌-III ಸಿಗ್ನಲ್‌ ಹುದ್ದೆ
Job Alert: ರೈಲ್ವೆ ಇಲಾಖೆ ನೇಮಕಾತಿ, 9,000 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ   title=
RRB Recruitment 2024

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿ ದೇಶದಾದ್ಯಂತ ಖಾಲಿ ಇರುವ 9,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಟೆಕ್ನಿಷಿಯನ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 9ರಂದೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 8 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 

ಹುದ್ದೆಯ ವಿವರ:1,100 ಟೆಕ್ನಿಷಿಯನ್‌ ಗ್ರೇಡ್‌-I ಸಿಗ್ನಲ್‌ ಹುದ್ದೆ ಮತ್ತು 7,900 ಟೆಕ್ನಿಷಿಯನ್‌ ಗ್ರೇಡ್‌-III ಸಿಗ್ನಲ್‌ ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಡಿಪ್ಲೋಮಾ ತೇರ್ಗಡೆಯಾಗಿರಬೇಕು ಅಥವಾ ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ: ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್

ವಯೋಮಿತಿ: ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ. OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಯೋಧರು ಮತ್ತು PWD ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: SC/ST, ಮಾಜಿ ಯೋಧರು, PWD, ಮಹಿಳೆಯರು, ತೃತೀಯ ಲಿಂಗಿಗಳು, ಆರ್ಥಿಕವಾಗಿ ದುರ್ಬಲರಾಗಿರುವವರು 250 ರೂ. ಮತ್ತು ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ: ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಸ್ಟೇಜ್‌-I, II ನಡೆಯಲಿದೆ. ಬಳಿಕ ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಆಯೋಜಿಸಲಾಗುವುದು. ಸಿಬಿಟಿ I ಆನ್‌ಲೈನ್‌ ಪರೀಕ್ಷೆಯಾಗಿದ್ದು, ಇದರಲ್ಲಿ ಸಾಮಾನ್ಯ ಜ್ಞಾನ, ಗಣಿತ, ಲಾಜಿಕಲ್ ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ. ಸಿಬಿಟಿ IIರಲ್ಲಿ ಸಾಮಾನ್ಯ ಜ್ಞಾನ, ಗಣಿತ, ಲಾಜಿಕಲ್‌ ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳ ಜೊತೆಗೆ ನಿಮ್ಮ ಟೆಕ್ನಿಕಲ್‌ ಜ್ಞಾನವನ್ನು ಪರೀಕ್ಷಿಸಲಾಗುತ್ತದೆ. ಈ ಎರಡೂ ಹಂತಗಳನ್ನು ದಾಟಿದವರ ಪ್ರಮಾಣ ಪತ್ರವನ್ನು ವಿವರವಾಗಿ ಪರಿಶೀಲಿಸಲಾಗುತ್ತದೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. 

ಇದನ್ನೂ ಓದಿ: Food Sequencing ಅಂದರೆ ಏನು? ಮಧುಮೇಹದಿಂದ ತೂಕ ಇಳಿಕೆಗೆ ಹೇಗೆ ಸಹಾಯ ಮಾಡುತ್ತದೆ?

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಟೆಕ್ನೀಷಿಯನ್‌ ಗ್ರೇಡ್‌ 1 ಸಿಗ್ನಲ್‌ಗೆ 29,200 ರೂ. ಮತ್ತು ಟೆಕ್ನೀಷಿಯನ್‌ ಗ್ರೇಡ್‌ 3 ಸಿಗ್ನಲ್‌ಗೆ 19,900 ರೂ. ಮಾಸಿಕ ವೇತನ ದೊರೆಯಲಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News