ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಖಾಲಿ ಇರುವ 450 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳವಾರ (ಸೆಪ್ಟೆಂಬರ್ 13)ದಿಂದಲೇ ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಕೆ ಪ್ರಾರಂಭವಾಗಿದ್ದು, ಅಕ್ಟೋಬರ್ 4 ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://opportunities.rbi.org.in/ ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಹತಾ ಮಾನದಂಡ: ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ (SC/ST/PwBD ಅಭ್ಯರ್ಥಿಗಳಿಗೆ ಉತ್ತೀರ್ಣ ವರ್ಗ) ಪದವಿ ಹೊಂದಿರಬೇಕು ಮತ್ತು PCಯಲ್ಲಿ ವರ್ಡ್ ಪ್ರೊಸೆಸಿಂಗ್ ಜ್ಞಾನವನ್ನು ಹೊಂದಿರಬೇಕು. ನಿರ್ದಿಷ್ಟ ನೇಮಕಾತಿ ಕಚೇರಿಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ/ನೇಮಕಾತಿ ಕಚೇರಿಯಡಿ ಬರುವ ಯಾವುದೇ ರಾಜ್ಯಗಳ ಭಾಷೆಯಲ್ಲಿ ಪ್ರವೀಣರಾಗಿರಬೇಕು.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 'ಬರ' ಗ್ಯಾರಂಟಿ ಖಚಿತ ಮತ್ತು ನಿಶ್ಚಿತ: ಬಿಜೆಪಿ
ವಯೋಮಿತಿ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು 2023ರ ಸೆಪ್ಟೆಂಬರ್ 1ರಂತೆ 20 ಮತ್ತು 28 ವರ್ಷಗಳ ನಡುವೆ ಇರಬೇಕು. 1995ರ ಸೆಪ್ಟೆಂಬರ್ 2ಕ್ಕಿಂತ ಮೊದಲು ಮತ್ತು 2003ರ ಸೆಪ್ಟೆಂಬರ್ 1ರ ನಂತರ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರಮುಖ ದಿನಾಂಕಗಳು: ಅಭ್ಯರ್ಥಿಗಳು ಅಕ್ಟೋಬರ್ 4ರವರೆಗೆ ಅರ್ಜಿ ಸಲ್ಲಿಸಬಹುದು. ಅ.4ರೊಳಗೆ ಆನ್‌ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಬಹುದಾಗಿದೆ. ಅ.21 ಮತ್ತು ಅ.23ರಂದು ಆನ್‌ಲೈನ್ ಪೂರ್ವಭಾವಿ ಪರೀಕ್ಷೆ (ತಾತ್ಕಾಲಿಕ) ನಡೆಯಲಿದೆ. ಡಿಸೆಂಬರ್ 2ರಂದು ಆನ್‌ಲೈನ್ ಮುಖ್ಯ ಪರೀಕ್ಷೆ(ತಾತ್ಕಾಲಿಕ) ನಡೆಯಲಿದೆ.
ಇದನ್ನೂ ಓದಿ: 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಬರ ಘೋಷಣೆ ಸಂಬಂಧಿಸಿ ಸಿಎಂಗೆ ಶಿಫಾರಸು: ಕೃಷ್ಣ ಬೈರೇಗೌಡ
ಅರ್ಜಿ ಶುಲ್ಕ: ಅಭ್ಯರ್ಥಿಗಳು SC/ST/PwBD/EXS ಇಂಟಿಮೇಷನ್ ಶುಲ್ಕ 50 ರೂ. ಜೊತೆಗೆ 18% GST, ಮಾಹಿತಿ ಶುಲ್ಕಗಳು ಸೇರಿದಂತೆ GEN/OBC/EWS ಅರ್ಜಿ ಶುಲ್ಕ 450 ರೂ. ಜೊತೆಗೆ 18% GST ಪಾವತಿಸಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.