Job Alert: ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ

Central Silk Board Job: ಸೆ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. SC/ST ಹಾಗೂ ಅಂಗವಿಕಲರಿಗೆ ಶುಲ್ಕ ವಿನಾಯಿತಿ ಇರುತ್ತದೆ ಹಾಗೂ ಇನ್ನುಳಿದ ಅಭ್ಯರ್ಥಿಗಳು ₹1,000 ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Written by - Puttaraj K Alur | Last Updated : Aug 28, 2024, 11:02 PM IST
  • ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
  • 'B' ವೃಂದದ 122 ವಿಜ್ಞಾನಿಗಳ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
  • ಸೆ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Job Alert: ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ  title=
Silk Board Recruitment 2024

Central Silk Board Job: ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ರೇಷ್ಮೆ ಮಂಡಳಿ ಭಾರತ ಸರ್ಕಾರದ ಟೆಕ್ಸ್‌ಟೈಲ್‌ ಸಚಿವಾಲಯದ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, 'B' ವೃಂದದ 122 ವಿಜ್ಞಾನಿಗಳ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. SC/ST ಹಾಗೂ ಅಂಗವಿಕಲರಿಗೆ ಶುಲ್ಕ ವಿನಾಯಿತಿ ಇರುತ್ತದೆ ಹಾಗೂ ಇನ್ನುಳಿದ ಅಭ್ಯರ್ಥಿಗಳು ₹1,000 ಅರ್ಜಿ ಶುಲ್ಕವನ್ನು ಪಾವತಿಸಬೇಕು. 

ಇದನ್ನೂ ಓದಿ: 20 ವರ್ಷಗಳವರೆಗೆ ನರೇಂದ್ರ ಮೋದಿಯವರನ್ನು ಹುಡುಕುತ್ತಿದ್ದರಂತೆ ಈ ಬ್ಯಾಂಕಿನವರು !ತಡವಾಗಿ ಬೆಳಕಿಗೆ ಬಂದ ಸತ್ಯ

ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ICARನ AICE JRF/SRF ತೇರ್ಗಡೆ ಹೊಂದಿರಬೇಕು. ಇದರ ಜೊತೆಗೆ ಪಿಎಚ್‌ಡಿಯನ್ನು ಹೊಂದಿರಬೇಕು.

ಈ ಎಲ್ಲಾ ಶೈಕ್ಷಣಿಕ ಅರ್ಹತೆಯ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್‌ ಸಿದ್ದಪಡಿಸಿ, ಮೀಸಲು ವರ್ಗವಾರು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ ೩ ವರ್ಷ ರೇಷ್ಮೆ ಮಂಡಳಿಯ ನಿಗದಿತ ಹುದ್ದೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ.

ಇದನ್ನೂ ಓದಿ: Daily GK Quiz: ಯಾವ ಖಂಡವನ್ನು 'ಡಾರ್ಕ್' ಖಂಡ ಎಂದು ಕರೆಯಲಾಗುತ್ತದೆ?

ಮಂಡಳಿಯ ದೇಶದ ಬೇರೆ ಬೇರೆ ಕಡೆಗೆ ಇರುವ ಕಚೇರಿಯಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅಧಿಸೂಚನೆ ಹಾಗೂ ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ www.csb.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News