Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10,884 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ರೈಲ್ವೆ ಇಲಾಖೆಯು ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಹುದ್ದೆಗಳ ವಿವರ: ಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್ 361, ಫ್ರೈಟ್ ಟ್ರೈನ್ ಮ್ಯಾನೇಜರ್ 2,684, ಕಮರ್ಷಿಯಲ್ ಟಿಕೆಟ್ ಕ್ಲರ್ಕ್ 1,985, ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ವೈಸರ್ 1,737, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್ 1,371, ಜೂನಿಯರ್ ಕ್ಲರ್ಕ್ ಟೈಪಿಸ್ಟ್ 990, ಸ್ಟೇಷನ್ ಮಾಸ್ಟರ್ 963, ಸೀನಿಯರ್ ಕ್ಲರ್ಕ್ ಟೈಪಿಸ್ಟ್ 725 ಮತ್ತು ಟ್ರೈನ್ ಕ್ಲರ್ಕ್ 68 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.


ಇದನ್ನೂ ಓದಿ: ಬಿಜೆಪಿ ಪಾದಯಾತ್ರೆ... ಹೈಕೋರ್ಟ್‌ನಿಂದ ಮಹತ್ವದ ಆದೇಶ !


ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ, ಪದವಿ ಇತ್ಯಾದಿ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.


ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.


ಆಯ್ಕೆ ಪ್ರಕ್ರಿಯೆ: ಸಿಬಿಟಿ 1, ಸಿಬಿಟಿ 2, ಕೌಶಲ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ದಿನಾಂಕ: ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ. 


ಇದನ್ನೂ ಓದಿ:  Best Scooters 2024: ಬಜೆಟ್‌ ಬೆಲೆಗೆ ಉತ್ತಮ ಮೈಲೇಜ್‌ ನೀಡುವ ಸ್ಕೂಟರ್‌ಗಳು


ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ https://indianrailways.gov.in/ ಭೇಟಿ ನೀಡಬಹುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.