Job Alert: ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಗ್ರಾಮೀಣ ಡಾಕ್ ಸೇವಕ್ ನೇಮಕಾತಿಯಲ್ಲಿ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಬ್ರಾಂಚ್ ಪೋಸ್ಟ್ ಮಾಸ್ಟರ್ ಎಂಬ ಎರಡು ಹುದ್ದೆಗಳಿವೆ. ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ವೇತನ ಶ್ರೇಣಿ 10,000 ರೂ.ನಿಂದ 24,470 ರೂ. ಇರುತ್ತದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ವೇತನ ಶ್ರೇಣಿ 12,000 ರೂ.ನಿಂದ 29,380 ರೂ. ನಡುವೆ ಇದೆ. ಚೌಕಿದಾರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ. ವೇತನ ಸಿಗುತ್ತದೆ.
Post Office Recruitment 2024: ಭಾರತೀಯ ಅಂಚೆ ಇಲಾಖೆಯ 44,228 ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂದಿನಿಂದಲೇ(ಜೂನ್ ೧೫) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಘಡ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: Daily GK Quiz: ವಿಸ್ತೀರ್ಣದಲ್ಲಿ ಭಾರತದ ಅತಿ ದೊಡ್ಡ ರಾಜ್ಯ ಯಾವುದು?
ಸೋಮವಾರದಿಂದ ಅಧಿಕೃತ ವೆಬ್‌ಸೈಟ್ indiapostgdsonline.gov.inನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಇಎ. ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ 10ನೇ ತರಗತಿಯ ಫಲಿತಾಂಶದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, 10ನೇ ತರಗತಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೆ ಅವರು ಬೈಸಿಕಲ್ ಸವಾರಿ ಮಾಡಲು ತಿಳಿದಿರಬೇಕು ಮತ್ತು 18 ರಿಂದ 40 ವರ್ಷದೊಳಗಿನವರಾಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಗ್ರಾಮೀಣ ಡಾಕ್ ಸೇವಕ್ ನೇಮಕಾತಿಯಲ್ಲಿ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಬ್ರಾಂಚ್ ಪೋಸ್ಟ್ ಮಾಸ್ಟರ್ ಎಂಬ ಎರಡು ಹುದ್ದೆಗಳಿವೆ. ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ವೇತನ ಶ್ರೇಣಿ 10,000 ರೂ.ನಿಂದ 24,470 ರೂ. ಇರುತ್ತದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ವೇತನ ಶ್ರೇಣಿ 12,000 ರೂ.ನಿಂದ 29,380 ರೂ. ನಡುವೆ ಇದೆ. ಚೌಕಿದಾರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ. ವೇತನ ಸಿಗುತ್ತದೆ.
ಅರ್ಜಿ ಸಲ್ಲಿಸುವ ಹಂತಗಳು
indiapostgdsonline.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿ 2024 ಲಿಂಕ್ ಮೇಲೆ ಕ್ಲಿಕ್ ಮಾಡಿ
ನೋಂದಣಿ ಶುಲ್ಕವನ್ನು ಪಾವತಿಸಿರಿ
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಅಗತ್ಯ ವಿವರಗಳೊಂದಿಗೆ ಅರ್ಜಿ ನಮೂನೆ ಭರ್ತಿ ಮಾಡಿ ಮತ್ತು ಸಲ್ಲಿಸಿ
ಕೊನೆಯದಾಗಿ ಸ್ವೀಕೃತಿ ನಮೂನೆಯನ್ನು ಡೌನ್ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿರಿ
ಇದನ್ನೂ ಓದಿ: ಅನಂತ್ ಅಂಬಾನಿ ಮದುವೆಯಲ್ಲಿ ವಿಶೇಷ ಸಾಮಗ್ರಿಯೊಂದಿಗೆ ಕಾಣಿಸಿಕೊಂಡ ನೀತಾ ಅಂಬಾನಿ!! ಅದೇನದು ?
ವಿಶೇಷ ಸೂಚನೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲು ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ದಾಖಲೆ ಪರಿಶೀಲನೆಯ ಸಮಯದಲ್ಲಿ ಹಾಜರಿರಬೇಕು. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ರೀತಿಯಲ್ಲಿ ಮರುಪಾವತಿಸುವುದಿಲ್ಲ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.