BSNL Recruitment 2024: ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 558 ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ಹುದ್ದೆಯ ವಿವರ: 450 ಟೆಲಿಕಾಂ ಆಪರೇಶನ್ಸ್​, 84 ಫೈನಾನ್ಸ್​, 13 ಸಿವಿಲ್ ಮತ್ತು 11 ಎಲೆಕ್ಟ್ರಿಕಲ್ ಹುದ್ದೆಗಳು ಖಾಲಿ ಇವೆ. 


ಇದನ್ನೂ ಓದಿ: ಇಂಜಿನಿಯರಿಂಗ್‌ ಪದವೀಧರರಿಗೆ ಉದ್ಯೋಗಾವಕಾಶ: ಟಿಸಿಎಸ್‌ನಿಂದ ನೇಮಕಾತಿ ಆರಂಭ


ವಿದ್ಯಾರ್ಹತೆ: ಟೆಲಿಕಾಂ ಆಪರೇಶನ್ಸ್‌ಗೆ EEE/ECE/CSE/IT/ಇನ್​​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್​, ಫೈನಾನ್ಸ್‌ಗೆ ಸಿಎ, ಸಿಎಂಎ, ಸಿವಿಲ್‌ಗೆ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಮತ್ತು ಎಲೆಕ್ಟ್ರಿಕಲ್‌ಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹24,900-50,500


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತ 


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು BSNL​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ ನೀಡಬಹುದು. 


ಇದನ್ನೂ ಓದಿ: Daily GK Quiz: ಯಾವ ನಗರವನ್ನು "ಸಿಟಿ ಆಫ್ ವಿಂಡ್ಸ್" ಎಂದು ಕರೆಯಲಾಗುತ್ತದೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.