ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 955 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್​ ಆಫೀಸರ್ (ACIO) ಗ್ರೇಡ್-2 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಸಂಪೂರ್ಣ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ತಿಳಿಯುವುದು ಮುಖ್ಯ.  


ಹುದ್ದೆಯ ಮಾಹಿತಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 955 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್​ ಆಫೀಸರ್ (ACIO) ಗ್ರೇಡ್-2/ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,900 ರಿಂದ 1,42,400 ರೂ. ವೇತನ ನೀಡಲಾಗುತ್ತದೆ.


ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.


ಇದನ್ನೂ ಓದಿ: Daily GK Quiz: ಯಾವ ಸ್ಥಳವನ್ನು ಭಾರತದ ಸ್ಕಾಟ್ಲೆಂಡ್ ಎಂದು ಕರೆಯಲಾಗುತ್ತದೆ?


ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು 450 ರೂ. ಪಾವತಿಸಬೇಕು.


ಪರೀಕ್ಷಾ ಶುಲ್ಕ: ಸಾಮಾನ್ಯ/ EWS/ ಒಬಿಸಿಯ ಪುರುಷ ಅಭ್ಯರ್ಥಿಗಳು ಆನ್‍ಲೈನ್ ಅಥವಾ ಚಲನ್ ಮೂಲಕ 100 ರೂ. ಪಾವತಿಸಬೇಕು


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅಭ್ಯರ್ಥಿಗಳು ಗುಪ್ತಚರ ಇಲಾಖೆಯ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 7353945553ಗೆ ಕರೆ ಮಾಡಬಹುದು.


ಇದನ್ನೂ ಓದಿ: Daily GK Quiz: ಭಾರತದ ಯಾವ ರಾಜ್ಯದಲ್ಲಿ ಸೂರ್ಯ ಮೊದಲು ಹುಟ್ಟುತ್ತಾನೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.