Job Alert: ಎಸ್ಬಿಐ PO ಹುದ್ದೆಗಳಿಗೆ ನೇಮಕಾತಿ, 2000 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
SBI PO Recruitment 2023: ವೈದ್ಯಕೀಯ, ಇಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ನೇಮಕಾತಿಗೆ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ್ದು, ಅಭ್ಯರ್ಥಿಗಳು ಬ್ಯಾಂಕ್‌ನ ವೃತ್ತಿ ಪೋರ್ಟಲ್‌ನಲ್ಲಿ ನೀಡಲಾಗಿರುವ ಲಿಂಕ್ sbi.co.in/web/careers/ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಈ ನೇಮಕಾತಿಗೆ ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯನ್ನು ನವೆಂಬರ್‌ನಲ್ಲಿ ನಡೆಸಲಾಗುತ್ತದೆ. ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ಪಡೆದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಹಿರಿಯ ನಾಗರಿಕರಿಗೆ ನಿವೃತ್ತಿ ನಂತರವೂ ಸಿಗುವುದು ಮಾಸಿಕ ಆದಾಯ !
ಪದವಿಯ ಅಂತಿಮ ವರ್ಷ ಅಥವಾ ಅಂತಿಮ ಸೆಮಿಸ್ಟರ್‍ನಲ್ಲಿ ಓದುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಅವರು ಸಂದರ್ಶನಕ್ಕೆ ಆಯ್ಕೆಯಾದರೆ ಡಿಸೆಂಬರ್ 12ರಂದು ಅಥವಾ ಮೊದಲು ಪದವಿ ಪಡೆದ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ. ವೈದ್ಯಕೀಯ, ಇಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಏಪ್ರಿಲ್ 1ಕ್ಕೆ ಅನ್ವಯವಾಗುವಂತೆ 21-30 ವರ್ಷ ವಯಸ್ಸಿನ ಅಭ್ಯರ್ಥಿಗಳು SBI POಗೆ ಅರ್ಜಿ ಸಲ್ಲಿಸಬಹುದು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ. ನೋಂದಣಿಗೆ ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST ಮತ್ತು PWBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ.?
ಮೊದಲು sbi.co.in/web/careersಗೆ ಭೇಟಿ ನಿಡಿ.
ಈಗ Join SBI ಮೇಲೆ ಕ್ಲಿಕ್ ಮಾಡಿ ನಂತರ current openings ಹೋಗಿ.
'ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ' ಮೇಲೆ ಕ್ಲಿಕ್ ಮಾಡಿ ಮತ್ತು ನಂತರ 'ಆನ್‌ಲೈನ್‌ನಲ್ಲಿ ಅನ್ವಯಿಸು' ಕ್ಲಿಕ್ ಮಾಡಿ.
ಇಲ್ಲಿ ನೀವು IBPS ಪೋರ್ಟಲ್‌ಗೆ ಮರುನಿರ್ದೇಶಿಸುವ ಆಯ್ಕೆಯನ್ನು ಪಡೆಯುತ್ತೀರಿ.
ಹೊಸ ನೋಂದಣಿಗಾಗಿ ಕ್ಲಿಕ್ ಮಾಡಿ ಮತ್ತು ಫಾರ್ಮ್ ಸಲ್ಲಿಸಿ.
ಈಗ ಲಾಗಿನ್ ಮಾಡಿ ಅರ್ಜಿ ಸಲ್ಲಿಸಿ ಮತ್ತು ಶುಲ್ಕ ಪಾವತಿಸಿ.
ಈಗ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ ಮತ್ತು ಪ್ರಿಂಟ್‍ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: ಸರ್ಕಾರಿ ನೌಕರರ ಬಡ್ತಿಗೆ ಹೊಸ ನಿಯಮ ! ಸರ್ಕಾರದಿಂದ ನೋಟಿಫಿಕೇಶನ್ ಜಾರಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.