Job Alert: ಯೂನಿಯನ್ ಬ್ಯಾಂಕ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ

Union Bank Recruitment 2024: ಗೋಲ್​ಕೀಪರ್ಸ್​- 2, ಡಿಫೆಂಡರ್ಸ್​​- 2, ಮಿಡ್​ಫೀಲ್ಡರ್ಸ್​- 2 ಮತ್ತು ಫಾರ್ವರ್ಡ್ಸ್​- 2 ಹುದ್ದೆಗಳು ಖಾಲಿಯಿವೆ. ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Jul 7, 2024, 03:28 PM IST
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • 8 ಸ್ಟಿಪೆಂಡಿಯರಿ ಪ್ಲೇಯರ್ಸ್​​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯ ಕೊನೆಯ ದಿನ
  • SSLC ಪಾಸಾದ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ, ಇಂದೇ ಅರ್ಜಿ ಸಲ್ಲಿಸಿರಿ
Job Alert: ಯೂನಿಯನ್ ಬ್ಯಾಂಕ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ title=
Union Bank Recruitment 2024

Union Bank Recruitment 2024: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಸ್ಟಿಪೆಂಡಿಯರಿ ಪ್ಲೇಯರ್ಸ್​​ ಹುದ್ದೆಗಳು ಖಾಲಿಯಿದ್ದು, ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಜುಲೈ 8 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಇದನ್ನೂ ಓದಿ: LK Advani Health Update: ಲಾಲ್ ಕೃಷ್ಣ ಅಡ್ವಾಣಿಯವರ ಆರೋಗ್ಯ ಹೇಗಿದೆ..?

ಹುದ್ದೆಯ ಮಾಹಿತಿ: ಗೋಲ್​ಕೀಪರ್ಸ್​- 2, ಡಿಫೆಂಡರ್ಸ್​​- 2, ಮಿಡ್​ಫೀಲ್ಡರ್ಸ್​- 2 ಮತ್ತು ಫಾರ್ವರ್ಡ್ಸ್​- 2 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 16ರಿಂದ ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹15,000 ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ: ಹಿಂದಿನ ಪರ್ಫಾರ್ಮೆನ್ಸ್​, ಸೆಲೆಕ್ಷನ್ ಟ್ರಯಲ್ಸ್ ಮತ್ತು ಟ್ರಯಲ್ಸ್ ಮ್ಯಾಚ್ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. 

ಇದನ್ನೂ ಓದಿ: ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Union Bankನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News