Job Alert: ಯೂನಿಯನ್ ಬ್ಯಾಂಕ್ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ
Union Bank Recruitment 2024: ಗೋಲ್ಕೀಪರ್ಸ್- 2, ಡಿಫೆಂಡರ್ಸ್- 2, ಮಿಡ್ಫೀಲ್ಡರ್ಸ್- 2 ಮತ್ತು ಫಾರ್ವರ್ಡ್ಸ್- 2 ಹುದ್ದೆಗಳು ಖಾಲಿಯಿವೆ. ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
Union Bank Recruitment 2024: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಸ್ಟಿಪೆಂಡಿಯರಿ ಪ್ಲೇಯರ್ಸ್ ಹುದ್ದೆಗಳು ಖಾಲಿಯಿದ್ದು, ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಜುಲೈ 8 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಇದನ್ನೂ ಓದಿ: LK Advani Health Update: ಲಾಲ್ ಕೃಷ್ಣ ಅಡ್ವಾಣಿಯವರ ಆರೋಗ್ಯ ಹೇಗಿದೆ..?
ಹುದ್ದೆಯ ಮಾಹಿತಿ: ಗೋಲ್ಕೀಪರ್ಸ್- 2, ಡಿಫೆಂಡರ್ಸ್- 2, ಮಿಡ್ಫೀಲ್ಡರ್ಸ್- 2 ಮತ್ತು ಫಾರ್ವರ್ಡ್ಸ್- 2 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 16ರಿಂದ ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹15,000 ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ಪ್ರಕ್ರಿಯೆ: ಹಿಂದಿನ ಪರ್ಫಾರ್ಮೆನ್ಸ್, ಸೆಲೆಕ್ಷನ್ ಟ್ರಯಲ್ಸ್ ಮತ್ತು ಟ್ರಯಲ್ಸ್ ಮ್ಯಾಚ್ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಇದನ್ನೂ ಓದಿ: ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Union Bankನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.