ದೇಶದ 45 ಭಾಗಗಳಲ್ಲಿ ಉದ್ಯೋಗ ಮೇಳ: ವರ್ಷದಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ

 5ನೇ ರಾಷ್ಟ್ರ ಮಟ್ಟದ ರೋಜಗಾರ್ ಮೇಳದಲ್ಲಿ ಅವರು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮುಂದಿನ ಒಂದು ವರ್ಷದಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದ್ದಾರೆ. ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು. 

Written by - Yashaswini V | Last Updated : May 16, 2023, 03:35 PM IST
  • ಇಂದು ಕರ್ನಾಟಕದ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ರೋಜಗಾರ್ ಮೇಳವನ್ನು ಆಯೋಜನೆ ಮಾಡಲಾಗಿದೆ.
  • ಹುಬ್ಬಳ್ಳಿಯಲ್ಲಿ ಅಂಚೆ ಹಾಗೂ ರೈಲ್ವೆ ಇಲಾಖೆಯ 201 ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ.
  • ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಲು ಎಲ್ಲರ ಸಹಕಾರ ಅಗತ್ಯ ಎಂದವರು ತಿಳಿಸಿದರು.
ದೇಶದ 45 ಭಾಗಗಳಲ್ಲಿ ಉದ್ಯೋಗ ಮೇಳ: ವರ್ಷದಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ  title=

ಹುಬ್ಬಳ್ಳಿ : ಇಂದು ದೇಶದ 45 ಭಾಗಗಳಲ್ಲಿ ರೋಜಗಾರ್ ಮೇಳವನ್ನು ಆಯೋಜನೆ ಮಾಡಲಾಗಿದೆ. ಆ ಮೂಲಕ ದೇಶದಾದ್ಯಂತ 71,206 ಯುವಜನತೆಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ ಹೇಳಿದರು.  

ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕ: 
ಇಂದು ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಅಂಚೆ ಇಲಾಖೆಯು ಗೃಹ ಇಲಾಖೆ, ರೈಲ್ವೆ ಇಲಾಖೆ, ನಿಮಾನ್ಸ್ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರ ಮಟ್ಟದ ರೋಜಗಾರ್ ಮೇಳದಲ್ಲಿ ಅವರು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮುಂದಿನ ಒಂದು ವರ್ಷದಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದ್ದಾರೆ. ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು. 

ಇದನ್ನೂ ಓದಿ- CBSC 12th Result Topper: ಸಿಬಿಎಸ್ಇ ಫಲಿತಾಂಶ ಪ್ರಕಟ, ಈ ಬಾರಿಯ ಟಾಪರ್ ಯಾರು?
 
ಇಂದು ಕರ್ನಾಟಕದ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ರೋಜಗಾರ್ ಮೇಳವನ್ನು ಆಯೋಜನೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಅಂಚೆ ಹಾಗೂ ರೈಲ್ವೆ ಇಲಾಖೆಯ 201 ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಲು ಎಲ್ಲರ ಸಹಕಾರ ಅಗತ್ಯ ಎಂದವರು ತಿಳಿಸಿದರು. 

ಇದನ್ನೂ ಓದಿ- ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್..!

ಹೊಸದಾಗಿ ನೇಮಕಾತಿ ಹೊಂದಿದ ರೈಲ್ವೆ ಇಲಾಖೆಯ ಅಂಕಿತಾ ಕುಮಾರಿ, ಅಂಚೆ ಇಲಾಖೆಯ ಚಂದನಾ ನಾಯ್ಕ, ಸೈಯ್ಯದ್ ಪತೆಷಾವಲಿ ಬೇಪಾರಿ ಸೇರಿದಂತೆ ಇತರರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅಂಚೆ ಇಲಾಖೆ, ರೈಲ್ವೆ ಇಲಾಖೆಗಳಲ್ಲಿ ಹೊಸದಾಗಿ ಆಯ್ಕೆಯಾದವರಿಗೆ ಉದ್ಯೋಗ ಪತ್ರಗಳನ್ನು ವಿತರಣೆ ಮಾಡಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News