Job fest 2023: ಸೆ.14ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ
Job fest 2023: ಈ ಉದ್ಯೋಗ ಮೇಳದಲ್ಲಿ ಮಡಿಕೇರಿಯ ಕಲ್ಯಾಣಿ ಮೋಟರ್ಸ್, ಮೈಸೂರಿನ ಮಾಂಡವಿ ಮೋಟರ್ಸ್, ಅಟೋ ಲೈವ್, ಕೂಡಿಗೆಯ SLN ಕಾಫಿ, ಮಡಿಕೇರಿಯ ಸಮರ್ಥ ನಿಧಿ ಲಿಮಿಟೆಡ್ ಸೇರಿದಂತೆ ವಿವಿಧ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.
ಮಡಿಕೇರಿ: ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14ರಂದು ಉದ್ಯೋಗ ಮೇಳೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಮಡಿಕೇರಿಯ ಕಲ್ಯಾಣಿ ಮೋಟರ್ಸ್, ಮೈಸೂರಿನ ಮಾಂಡವಿ ಮೋಟರ್ಸ್, ಅಟೋ ಲೈವ್, ಕೂಡಿಗೆಯ SLN ಕಾಫಿ, ಮಡಿಕೇರಿಯ ಸಮರ್ಥ ನಿಧಿ ಲಿಮಿಟೆಡ್ ಸೇರಿದಂತೆ ವಿವಿಧ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸಿಎಂ ಹೇಳಿದ್ದೇನು?
SSLC, ಪಿಯುಸಿ, ಐಟಿಐ, ಡಿಪ್ಲೋಮೋ ಸೇರಿದಂತೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಲು ತಿಳಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೂ.ಸಂ 08272-225821ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ತಿಳಿಸಿದ್ದಾರೆ.
ಇದನ್ನೂ ಓದಿ: ನಾವು ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.