ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಫೈನಾನ್ಸಿಯಲ್ ಕಂಟ್ರೋಲರ್​ ಹುದ್ದೆ ಖಾಲಿ ಇದೆ. ಬೆಂಗಳೂರಿನಲ್ಲಿ ವೃತ್ತಿ ಮಾಡಬಯಸುವವರು ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಬೃಹತ್‌ ಹೈ ಟೆನ್ಷನ್‌ ವಿದ್ಯುತ್‌ ಕಂಬಗಳ ದುರಸ್ತಿ ಕಾರ್ಯ


ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 8, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹1,44,200-₹2,18,200


ಉದ್ಯೋಗದ ಸ್ಥಳ: ಬೆಂಗಳೂರು


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಇದನ್ನೂ ಓದಿ: ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡೋರಿಗೆ ಶಾಕಿಂಗ್‌ ನ್ಯೂಸ್


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಲಿಂಕ್ https://recruitment.iisc.ac.in/regular_position/‌ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.