Bank Job :  ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ 100  ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ punjabandsindbank.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿದೆ. ಅರ್ಜಿದಾರರು ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದು, ವಯಸ್ಸು 20 ರಿಂದ 28 ವರ್ಷಗಳ ನಡುವೆ ಇದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


COMMERCIAL BREAK
SCROLL TO CONTINUE READING

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 :
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ 2024ಗಾಗಿ ಜಾಹೀರಾತನ್ನು ಅಧಿಕೃತ ವೆಬ್‌ಸೈಟ್ punjabandsindbank.co.inನಲ್ಲಿ ಬಿಡುಗಡೆ ಮಾಡಲಾಗಿದೆ. ಅಧಿಕೃತ ಅಧಿಸೂಚನೆ PDF ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ವೇತನ ವಿವರಗಳು, ಪ್ರಮುಖ ದಿನಾಂಕಗಳನ್ನು ಒಳಗೊಂಡಿದೆ.ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಲು ಸೂಚಿಸಲಾಗಿದೆ.


ಇದನ್ನೂ ಓದಿ : KPTCL Recruitment 2024: 10ನೇ ತರಗತಿ ಪಾಸಾದವರು ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ


ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆ 2024 : 
ದೆಹಲಿ ಮತ್ತು ಪಂಜಾಬ್‌ನಲ್ಲಿ ಒಟ್ಟು 100 ಖಾಲಿ ಹುದ್ದೆಗಳನ್ನು ಘೋಷಿಸಲಾಗಿದೆ. ಇವುಗಳಲ್ಲಿ 30 ಹುದ್ದೆಗಳು ದೆಹಲಿ ಶಾಖೆಗಳಿಗೆ, 70 ಹುದ್ದೆಗಳು ಪಂಜಾಬ್ ಶಾಖೆಗಳಿಗೆ ಸೇರಿದ್ದಾಗಿದೆ. 


ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಗಳು ಮತ್ತು ವಯಸ್ಸಿನ ಮಿತಿ ಮಾನದಂಡಗಳನ್ನು ಪೂರೈಸಬೇಕು:


ವಯೋಮಿತಿ: ಕನಿಷ್ಠ ವಯೋಮಿತಿ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ ವಯೋಮಿತಿ ಅಕ್ಟೋಬರ್ 21ಕ್ಕೆ 28 ವರ್ಷಗಳಿಗೆ ನಿಗದಿಪಡಿಸಲಾಗಿದೆ.


ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ತತ್ಸಮಾನ ವಿದ್ಯಾರ್ಹತೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.


ಇದನ್ನೂ ಓದಿ : Career Updates: ನೀವು ಪತ್ರಕರ್ತರಾಗಬೇಕೇ? ಹಾಗಿದ್ದಲ್ಲಿ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ..!


ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 ಗೆ ಅರ್ಜಿ ಸಲ್ಲಿಸುವುದು ಹೇಗೆ ?:
೧.ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ punjabsindbank.co.in ಗೆ ಹೋಗಿ.
೨.ಮುಖಪುಟದಲ್ಲಿ "ನೇಮಕಾತಿ" ವಿಭಾಗಕ್ಕೆ ಹೋಗಿ.
೩.ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 ಗಾಗಿ "Apply Online" ಲಿಂಕ್‌ಗಾಗಿ ಸರ್ಚ್ ಮಾಡಿ ಅದರ ಮೇಲೆ ಕ್ಲಿಕ್ ಮಾಡಿ.
೪. ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ನೋಂದಾಯಿಸಿ.
೫.ರಿಜಿಸ್ಟ್ರೇಶನ್ ನಂತರ ಲಾಗಿನ್ ಕ್ರೆಡೆನ್ಶಿಯಲ್ ಸಿಗುತ್ತದೆ  
೬. ಲಾಗಿನ್ ಕ್ರೆಡೆನ್ಶಿಯಲ್ ಬಳಸಿಕೊಂಡು ಡ್ಯಾಶ್‌ಬೋರ್ಡ್‌ಗೆ ಲಾಗಿನ್ ಮಾಡಿ.
೭ . ಎಲ್ಲಾ ಅಗತ್ಯ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
೮.ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
೯. ಕೆಟಗರಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
೧೦. ಫಾರ್ಮ್ ಸಬ್ಮಿಟ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.