Job Updates: ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಮತ್ತು ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ‌ ಮೇಲೆ "ಕಾನೂನು ಸಲಹೆಗಾರರ"  ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

Written by - Manjunath N | Last Updated : Jul 11, 2023, 07:26 AM IST
  • ಅರ್ಜಿ ಸಲ್ಲಿಕೆಯು ಜುಲೈ 12 ರಿಂದ ಪ್ರಾರಂಭಗೊಂಡು ಜುಲೈ 30ರ ಅಪರಾಹ್ನ 3 ಗಂಟೆ ವರೆಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ
  • ನಿಗದಿತ ಅವಧಿಯಲ್ಲಿ ಜಿಲ್ಲಾಧಿಕಾರಿಗಳು, ಕಲಬುರಗಿ ಕಾರ್ಯಾಲಯಕ್ಕೆ ಅರ್ಜಿದಾರರು ನೇರವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
  • ತಡವಾಗಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
Job Updates: ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಮತ್ತು ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ‌ ಮೇಲೆ "ಕಾನೂನು ಸಲಹೆಗಾರರ"  ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು, ಕಾನೂನು ಪದವೀಧರರು (ಎಲ್.ಎಲ್.ಬಿ), ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ನಿವೃತ್ತ ತಹಸೀಲ್ದಾರ ಹಾಗೂ ನಿವೃತ್ತ ಉಪ ತಹಸೀಲ್ದಾರ ಇವರು ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ ಎಂದು‌ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಅರ್ಜಿ ಸಲ್ಲಿಕೆಯು ಜುಲೈ 12 ರಿಂದ ಪ್ರಾರಂಭಗೊಂಡು ಜುಲೈ 30ರ ಅಪರಾಹ್ನ 3 ಗಂಟೆ ವರೆಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ನಿಗದಿತ ಅವಧಿಯಲ್ಲಿ ಜಿಲ್ಲಾಧಿಕಾರಿಗಳು, ಕಲಬುರಗಿ ಕಾರ್ಯಾಲಯಕ್ಕೆ ಅರ್ಜಿದಾರರು ನೇರವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. 

ಇದನ್ನೂ ಓದಿ: ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್

ಇನ್ನು ಕಾನೂನು ಸಲಹೆಗಾರರೆಂದು ನೇಮಕವಾದವರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ 313(ಬಿ) ಪ್ರಕಾರ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News