ಬೆಂಗಳೂರು : ಮೈಸೂರಿನ ಜೆಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2022-23ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಕಾಲೇಜಿನಲ್ಲಿರುವ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ ಕೋರ್ಸುಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು. ಶೇ.40 ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮತ್ತು ಮೇಲ್ಪಟ್ಟು ಕಿವುಡು ಮತ್ತು ಮೂಗು ಅಂಗವಿಕಲತೆ ಭಾಗಶಃ ಮತ್ತು ಪೂರ್ಣ ಅಂಧತ್ವ ಹೊಂದಿರಬೇಕು.ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ: ನ್ಯಾ.ಕೆ.ಭಕ್ತವತ್ಸಲ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚನೆ


ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗುವುದು.


ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‌ಎಸ್ ತಾಂತ್ರಿಕ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ವಿಳಾಸಕ್ಕೆ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-1 ವರ್ಗದವರಿಗೆ ರೂ.50/-) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್:  www.jsspda.org ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.


ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್, ಇ-ಮೇಲ್:  jsspda@gmail.com ಮೊ.ಸಂ.: 9686677236 ಗೆ ಸಂಪರ್ಕಿಸಬಹುದು ಎಂದು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ