JSSC 2022: ಪಿಯುಸಿ ತೇರ್ಗಡೆ ಹೊಂದಿದ ಯುವಕರಿಗೆ ಉದ್ಯೋಗ ಪಡೆಯಲು ಇದೇ ಸುವರ್ಣಾವಕಾಶ!

ಆನ್‌ಲೈನ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟು 991 ಖಾಲಿ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಈ ನೇಮಕಾತಿ ಅಭಿಯಾನವನ್ನು ನಡೆಸಲಾಗುತ್ತಿದೆ. 964 ಹುದ್ದೆಗಳು ಕ್ಲರ್ಕ್, 27 ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇವೆ. 

Written by - Bhavishya Shetty | Last Updated : May 29, 2022, 01:39 PM IST
  • ಜೆಎಸ್‌ಎಸ್‌ಸಿನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜೂನ್ 9, 2022ರ ಒಳಗೆ ಅರ್ಜಿ ಸಲ್ಲಿಸಬೇಕು
  • ಅಧಿಕೃತ ವೆಬ್‌ಸೈಟ್ jssc.nic.in ಮೂಲಕ ಅರ್ಜಿ ಸಲ್ಲಿಕೆ
JSSC 2022: ಪಿಯುಸಿ ತೇರ್ಗಡೆ ಹೊಂದಿದ ಯುವಕರಿಗೆ ಉದ್ಯೋಗ ಪಡೆಯಲು ಇದೇ ಸುವರ್ಣಾವಕಾಶ! title=
JSSC 2022

ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (JSSC) ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇತ್ತೀಚೆಗಷ್ಟೇ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾದೆ. ಅರ್ಹ ಅಭ್ಯರ್ಥಿಗಳು 19 ಜೂನ್ 2022 ರ ಒಳಗೆ ಆಯೋಗದ ಅಧಿಕೃತ ವೆಬ್‌ಸೈಟ್ jssc.nic.in ಮೂಲಕ ಅರ್ಜಿ ಸಲ್ಲಿಸಬಹುದು. 

ಆನ್‌ಲೈನ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟು 991 ಖಾಲಿ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ಈ ನೇಮಕಾತಿ ಅಭಿಯಾನವನ್ನು ನಡೆಸಲಾಗುತ್ತಿದೆ. 964 ಹುದ್ದೆಗಳು ಕ್ಲರ್ಕ್, 27 ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇವೆ. 

ಇದನ್ನು ಓದಿ: Aadhar Card New Rules: ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಅಡ್ವೈಸರಿ ಜಾರಿಗೊಳಿಸಿದ ಸರ್ಕಾರ

ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯ ಪ್ರಕ್ರಿಯೆಯು ಮೇ 20, 2022 ರಿಂದ ಪ್ರಾರಂಭವಾಗಿದೆ. ಎಲ್ಲಾ ಅಭ್ಯರ್ಥಿಗಳು ಜೂನ್ 19, 2022 ರೊಳಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ನಮೂನೆಯಲ್ಲಿ ತಪ್ಪಿದ್ದರೆ ಜೂನ್ 26ರಿಂದ 30ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: 
12 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಕ್ಲರ್ಕ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇದಲ್ಲದೆ, ಸ್ಟೆನೋಗ್ರಾಫರ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 40 ವರ್ಷವಾಗಿರಬೇಕು. 

ಅರ್ಜಿ ಶುಲ್ಕ:
ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಸಾಮಾನ್ಯ, OBC, EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 100 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ ಮತ್ತು ಎಸ್‌ಟಿ ವರ್ಗದವರಿಗೆ50 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

ಇದನ್ನು ಓದಿ: ಈ ಅಕ್ಷರದ ಹುಡುಗರು ಹುಡುಗಿಯರ ವಿಷಯದಲ್ಲಿ ತುಂಬಾ ಅದೃಷ್ಟವಂತರು!

ಈ ರೀತಿ ಅರ್ಜಿ ಸಲ್ಲಿಸಿ: 
ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗದ ಅಧಿಕೃತ ವೆಬ್‌ಸೈಟ್ jssc.nic.in ಗೆ ಭೇಟಿ ನೀಡಬೇಕು. ಇಲ್ಲಿ ನೀವು ಈ ನೇಮಕಾತಿಯ ಅಧಿಸೂಚನೆ ಮತ್ತು ಅಪ್ಲಿಕೇಶನ್‌ನ ಲಿಂಕ್ ಅನ್ನು ಪಡೆದು, ಸಂಪೂರ್ಣ ಮಾಹಿತಿ ದಾಖಲಿಸಬೇಕು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News