ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶವನ್ನು ಮೇ 21 ರಂದು ಅಂದರೆ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ಪರಿಶೀಲಿಸಬಹುದು. 


COMMERCIAL BREAK
SCROLL TO CONTINUE READING

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅದನ್ನು ಪರಿಗಣಿಸುವುದಾಗಿ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ


ಹೆಚ್ಚು ಅಂಕ ಬಂದ ಬಂದ ಪರೀಕ್ಷೆಯನ್ನೇ ಪರಿಗಣಿಸಿ ಸಿಇಟಿ ರ‍್ಯಾಂಕ್‌ ನೀಡಲಾಗುವುದು ಎಂದು ಇಲಾಖೆ ತಿಳಿಸಿತ್ತು. ಈ ಕಾರಣದಿಂದ ಎರಡನೇ ಪರೀಕ್ಷೆಯ ಫಲಿತಾಂಶ ಬರುವವರೆಗೆ ಕಾಯಬೇಕಾಗುವುದು ಅನಿವಾರ್ಯ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.


ಏನಿದು ಪಿಯುಸಿ ಪರೀಕ್ಷೆ-2?


ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿತ್ತು. 


2024 ರ ಪರೀಕ್ಷೆ-1 ರಲ್ಲಿ ಪಾಸ್‌ ಆದ ಮತ್ತು ಇನ್ನಷ್ಟು ಹೆಚ್ಚಿನ ಅಂಕ ಪಡೆಯಲು ಇಚ್ಛಿಸಿದ ವಿದ್ಯಾರ್ಥಿಗಳು ಪರೀಕ್ಷೆ-2 ಬರೆದಿದ್ದರು. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಮತ್ತು ಗೈರು ಹಾಜರಾದ ವಿದ್ಯಾರ್ಥಿಗಳು ಸಹ ಪರೀಕ್ಷೆ-2 ಬರೆಯಲು ಅವಕಾಶ ನೀಡಲಾಗಿತ್ತು. 


ಫಲಿತಾಂಶ ಚೆಕ್‌ ಮಾಡುವ ವಿಧಾನ: 


1) ಮೊದಲು karresults.nic.in ನಲ್ಲಿ ಪೋರ್ಟಲ್‌ಗೆ ಭೇಟಿ ನೀಡಿ.


2) ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್‌ ಮಾಡಿ.


3)ನಿಮ್ಮ ನೋಂದಣಿ ಸಂಖ್ಯೆ ಮತ್ತು ವಿಜ್ಞಾನ, ವಾಣಿಜ್ಯ ಮತ್ತು ಕಲೆ ಇವುಗಳಲ್ಲಿ ನಿಮ್ಮ ವಿಭಾಗ ಆಯ್ಕೆ ಮಾಡಿಕೊಳ್ಳಿ.


4) ಈಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
 
5) ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಟ್ಟುಕೊಳ್ಳಿ. 


ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಟ್ರಕ್ ಪಲ್ಟಿಯಾಗಿ 15 ಜನರ ಧಾರುಣ ಸಾವು 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.