Karnataka 2nd PUC Result 2022: ಶೇ.61.88ರಷ್ಟು ಉತ್ತೀರ್ಣ, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ
Karnataka 2nd PUC Result 2022: ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಸ್ಥಾನ ಮತ್ತು ವಿಜಯಪುರ 3ನೇ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಪರೀಕ್ಷೆಗೆ ಒಟ್ಟು 6,83,563 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 4.22,966(ಶೇ.61.88) ಇದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.88.02ರಷ್ಟು, ಉಡುಪಿ ಜಿಲ್ಲೆಯ ಶೇ.86.38ರಷ್ಟು ಹಾಗೂ ವಿಜಯಪುರದ ಶೇ.77.14ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
Karnataka 2nd PUC ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ
ವಿಜ್ಞಾನ ವಿಭಾಗದ ಶೇ.72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ.64.97ರಷ್ಟು ಹಾಗೂ ಕಲಾ ವಿಭಾಗದಲ್ಲಿ ಶೇ.48.71ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.0.6 ರಷ್ಟು ಫಲಿತಾಂಶ ಏರಿಕೆ ಆಗಿದ್ದು, ಆಗಸ್ಟ್ 1ಕ್ಕೆ ಪಿಯು ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
Textbook Revision Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.