Karnataka 2nd PUC Supplementary Result 2024 : 2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು karresults.nic.in ನಲ್ಲಿ  ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಪರೀಕ್ಷೆಗೆ  1,49,824 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 52,505 ವಿದ್ಯಾರ್ಥಿಗಳು  ಉತ್ತೀರ್ಣರಾಗಿದ್ದಾರೆ. 


COMMERCIAL BREAK
SCROLL TO CONTINUE READING

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2ನ್ನು ಏಪ್ರಿಲ್ 29 ರಿಂದ ಮೇ 16 ರವರೆಗೂ ನಡೆಸಲಾಗಿತ್ತು. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳು   
 35.25%  ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ 1.48 ಲಕ್ಷ ಪೈಕಿ 52 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ 26,496 ಮಂದಿ ಬಾಲಕರು, 26,009 ಮಂದಿ ಬಾಲಕಿಯರು ಸೇರಿದ್ದಾರೆ.


ಇದನ್ನೂ ಓದಿ : Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ


ಫಲಿತಾಂಶ ಚೆಕ್  ಮಾಡುವುದು ಹೇಗೆ ? :
1) ಮೊದಲು karresults.nic.in ನಲ್ಲಿ ಪೋರ್ಟಲ್‌ಗೆ ಭೇಟಿ ನೀಡಿ.
2) ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್‌ ಮಾಡಿ.
3)ನಿಮ್ಮ ನೋಂದಣಿ ಸಂಖ್ಯೆ ಮತ್ತು ವಿಭಾಗ ಆಯ್ಕೆ ಮಾಡಿಕೊಳ್ಳಿ.
4) ಈಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
5)ಮಾರ್ಕ್ ಶೀಟ್ ಅನ್ನು ಡೌನ್‌ಲೋಡ್ ಮಾಡಿ ಪ್ರಿಂಟ್‌ ಔಟ್‌ ತೆಗೆದಿಟ್ಟುಕೊಳ್ಳಿ.


ಇದನ್ನೂ ಓದಿ :  CBSE Class 10th Result 2024:ಆಕ್ಟಿವ್ ಆಗಿದೆ CBSE 10ನೇ ಮರುಮೌಲ್ಯಮಾಪನ ಲಿಂಕ್: ಅರ್ಜಿ ಸಲ್ಲಿಸಲು ಹೀಗೆ ಮಾಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.