Exam Cancel : 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದು : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬಗ್ಗೆ ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : 5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬಗ್ಗೆ ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.
ಶಿಕ್ಷಣ ಇಲಾಖೆ ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ : ಯುಗಾದಿ ಶಾಪಿಂಗ್ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ ಬೆಂಗಳೂರು ಉತ್ಸವ
ಈ ಬಗ್ಗೆ ಮಾತನಾಡಿದ ರೂಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡಿತ್ತು. ಇದೆ ಮಾ.13 ರಿಂದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ..? ಎದು ಶಿಕ್ಷಣ ಇಲಾಖೆಯ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದೆವು. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕಾರ್ಮಿಕರ ಮುಷ್ಕರ: ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗಳು ಸ್ಥಗಿತ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.