5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ, ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Karnataka Board Exam: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಲ್ಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಫಲಿತಾಂಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. 

Written by - Yashaswini V | Last Updated : Mar 27, 2024, 09:19 AM IST
  • 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ
  • 5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನಕ್ಕೆ ನೀಡಲಾದ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದಂತೆ
    ವಿಷಯವಾರು ಕೀ ಉತ್ತರಗಳ ಪ್ರತಿ ಕ್ಷೇತ್ರಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಲಭ್ಯ
  • ಈಗಾಗಲೇ ಉಲ್ಲೇಖ(1) ರ ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಮೌಲ್ಯಮಾಪನ ಕಾರ್ಯವನ್ನು ಬ್ಲಾಕ್ ಹಂತದಲ್ಲಿ ಅಂತರ್ ಕ್ಲಸ್ಟರ್‌ವಾರು ನಿರ್ವಹಿಸಬೇಕಿರುತ್ತದೆ.
5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ, ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ  title=

Karnataka Board Exam: 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಸೂಚನೆ ನೀಡಿರುವ ಶಿಕ್ಷಣ ಇಲಾಖೆ ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿಗಳ ಮೌಲ್ಯಾಂಕನ ಮೌಲ್ಯಮಾಪನವನ್ನು ಏಪ್ರಿಲ್ 2 ರ ಒಳಗೆ ಪೂರ್ಣಗೊಳಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಆದೇಶಿಸಿದೆ. 

2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಫಲಿತಾಂಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. 

ಇದನ್ನೂ ಓದಿ- GK Quiz: 'ರಿವರ್ಸ್ ಫ್ಲಿಕ್ ' ಶಬ್ದವನ್ನು ಯಾವ ಆಟದಲ್ಲಿ ಬಳಸಲಾಗುತ್ತದೆ?

ಇದರಲ್ಲಿ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ (Summative Assessment-(SA-2) ಕಾರ್ಯವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ, ದಿನಾಂಕ:11.03.2024 ಮತ್ತು 12.03.2024 ರಂದು ಹಾಗೂ ಉಳಿದ ವಿಷಯಗಳ ಮೌಲ್ಯಾಂಕನವನ್ನು ಉಲ್ಲೇಖ(2) ರನ್ವಯ, ದಿನಾಂಕ:25.03.2024 ರಿಂದ 28.03.2024 ರವರೆಗೆ ನಡೆಸಲಾಗುತ್ತಿದೆ.

ಇದನ್ನೂ ಓದಿ- GK Quiz: ಯಾವ ದೇಶದ ಸಂಸತ್ತಿಗೆ 'ಮಜಲೀಸ್' ಎಂದು ಕರೆಯಲಾಗುತ್ತದೆ?

5,8 ಮತ್ತು 9ನೇ ತರಗತಿಗಳ ಮೌಲ್ಯಾಂಕನಕ್ಕೆ ನೀಡಲಾದ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದಂತೆ ವಿಷಯವಾರು ಕೀ ಉತ್ತರಗಳ ಪ್ರತಿಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಲಭ್ಯಮಾಡಲಾಗುತ್ತಿದ್ದು, ಈಗಾಗಲೇ ಉಲ್ಲೇಖ(1) ರ ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಮೌಲ್ಯಮಾಪನ ಕಾರ್ಯವನ್ನು ಬ್ಲಾಕ್ ಹಂತದಲ್ಲಿ ಅಂತರ್ ಕ್ಲಸ್ಟರ್‌ವಾರು ನಿರ್ವಹಿಸಬೇಕಿರುತ್ತದೆ. ದಿನಾಂಕ:02.04.2024 ರ ಒಳಗಾಗಿ ಪೂರ್ಣಗೊಳಿಸುವುದು ಹಾಗೂ ಎಲ್ಲಾ ತರಗತಿಗಳ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳನ್ನು ಶಾಲೆಗಳಿಗೆ ಮರು ರವಾನೆ ಮಾಡುವುದು ಎಂದು ಇಲಾಖೆ ಹೊರಡಿಸಲಾಗಿರುವ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News