ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗೆ ಬರುವ ಅಭ್ಯರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಹಾಲ್‌ಗೆ ಪ್ರವೇಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಣೆಯಲ್ಲಿ ತಿಳಿಸಿದೆ. ಅಧಿಸೂಚನೆಯ ಪ್ರಕಾರ, ಪ್ರವೇಶ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಹಿಜಾಬ್ ತೆಗೆದು ಪರೀಕ್ಷಾ ಹಾಲ್‌ಗೆ ಬರಬೇಕು ಎಂದು ತಿಳಿಸಿದೆ.


COMMERCIAL BREAK
SCROLL TO CONTINUE READING

ಸಿಇಟಿಗೆ ಹಾಜರಾಗುವ ವಿದ್ಯಾರ್ಥಿಗಳು 'ಮಂಗಲ ಸೂತ್ರ', ಮೂಗುತಿ, ಕಿವಿಯೋಲೆ, ಚಿನ್ನದ ಸರ, ಬಳೆಗಳು ಮತ್ತು ಇತರ ಚಿನ್ನದ ಆಭರಣಗಳನ್ನು ಧರಿಸಿ ಬರುವುದನ್ನು ನಿಷೇದಿಸಲಾಗಿದೆ. ವಿದ್ಯಾರ್ಥಿಗಳು ಕೈಗಡಿಯಾರಗಳು, ಕ್ಯಾಲ್ಕುಲೇಟರ್‌ಗಳು ಮತ್ತು ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ತರಲು ಅವಕಾಶ ನಿರಾಕರಿಸಲಾಗಿದೆ.


ಇದನ್ನೂ ಓದಿ : PSI Recruitment Scam: ಗೃಹಸಚಿವ ಆರಗ ಜ್ಞಾನೇಂದ್ರಗೆ 8 ಎಂಎಲ್ಎಗಳಿಂದ ಪತ್ರ


ಪೊಲೀಸ್-ಇನ್‌ಸ್ಪೆಕ್ಟರ್‌ಗಳು (ಪಿಎಸ್‌ಐ) ಪರೀಕ್ಷೆ ಅಕ್ರಮ ಹಿನ್ನೆಲೆಯಲ್ಲಿ, ಈ ಪರೀಕ್ಷೆಗಳನ್ನು ನ್ಯಾಯಯುತವಾಗಿ ನಡೆಸಲು ಈ ನಿರ್ಧಾರವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. 


ಸಿಇಟಿ ಪರೀಕ್ಷೆ ಯಾವಾಗ ನಡೆಯಲಿದೆ


ಜೂನ್ 16
ಜೂನ್ 17
ಜೂನ್ 18


ನೀಟ್ ಪರೀಕ್ಷೆಯ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಮತ್ತು ಪರೀಕ್ಷಾ ಹಾಲ್‌ಗಳಲ್ಲಿ ಜಾಮರ್‌ಗಳು ಮತ್ತು ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ. ಸುಮಾರು 2.11 ಲಕ್ಷ ವಿದ್ಯಾರ್ಥಿಗಳು ಅದ್ರಲ್ಲಿ 1.4 ಲಕ್ಷ ವಿದ್ಯಾರ್ಥಿಗಳು ಮತ್ತು 1.7 ಲಕ್ಷ ವಿದ್ಯಾರ್ಥಿನಿಯರು  ಸಿಇಟಿ ಪರೀಕ್ಷೆ ದಾಖಲಿಸಿಕೊಂಡಿದ್ದಾರೆ.


ಇದನ್ನೂ ಓದಿ : Textbook Revision Row: ‘ಸಂವಿಧಾನ ಶಿಲ್ಪಿ’ ಬಿರುದು ತೆಗೆದು ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ