ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್(KAS) ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ದೊರೆತಿದೆ. ರಾಜ್ಯದಲ್ಲಿ ಖಾಲಿ ಇರುವ ಬರೋಬ್ಬರಿ 504 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಹೌದು, KAS ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯುತ್ತಿದೆ. ವಿಧಾನಪರಿಷತ್ತಿನಲ್ಲಿ  ನಿರಾಣಿ ಹಣಮಂತ್ ರುದ್ರಪ್ಪ ಕೇಳಿದ  ಪ್ರಶ್ನೆಗೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ಯಾವ ಯಾವ ಇಲಾಖೆಗಳಿಂದ ಖಾಲಿಯಿರುವ KAS ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆರ್ಥಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿವೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಸಿಎಂ ಸಿದ್ಧರಾಮಯ್ಯನವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ, ಕಂದಾಯ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ, ವಾಣಿಜ್ಯ ತೆರಿಗೆಗಳ ಇಲಾಖೆ, ಖಜಾನೆ ಇಲಾಖೆ, ಸಹಕಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ


ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳ ಭರ್ತಿ?


ವಾಣಿಜ್ಯ ತೆರಿಗೆ ಇಲಾಖೆ - 140


ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ – 85


ಕಂದಾಯ ಇಲಾಖೆ - 76


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 55


ಖಜಾನೆ ಇಲಾಖೆ -48


ಸಮಾಜ ಕಲ್ಯಾಣ ಇಲಾಖೆ – 27


ಸಹಕಾರ ಇಲಾಖೆ - 21


ಪೊಲೀಸ್ ಇಲಾಖೆ – 10


ಅಬಕಾರಿ ಇಲಾಖೆ - 10


ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ - 09


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ - 07


ಯುವಜನ ಸಬಲೀಕರಣ ಮತ್ತು ಕ್ರೀಢಾ ಇಲಾಖೆ - 04


ಕಾರ್ಮಿಕ ಇಲಾಖೆ - 04


ಕಾರಾಗೃಹ ಇಲಾಖೆ -03


ಕೌಶಲ್ಯಾಭಿವೃದ್ಧಿ ಇಲಾಖೆ - 03


ಪ್ರವಾಸೋದ್ಯಮ ಇಲಾಖೆ - 02


ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ರಣತಂತ್ರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.