PUC Results 2022 Date: ಜೂ.25ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ!

ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Written by - Zee Kannada News Desk | Last Updated : Jun 13, 2022, 06:29 PM IST
  • ಜೂನ್ 20ರಿಂದ 25ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ
  • karresults.nic.in ಮತ್ತು pue.kar.nic.in. ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಿರಲಿದೆ
  • 2021-22ನೇ ಸಾಲಿನ PUC ಪರೀಕ್ಷೆಯನ್ನು ಏಪ್ರಿಲ್‌ 22ರಿಂದ ಮೇ 18ರವರೆಗೆ ನಡೆಸಲಾಗಿತ್ತು
PUC Results 2022 Date: ಜೂ.25ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ! title=
ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ತಿಂಗಳಾಗುತ್ತಾ ಬಂತು. ಆದರೆ, ಯಾವಾಗ ಫಲಿತಾಂಶ ಬಿಡುಗಡೆಯಾಗುತ್ತೋ ಅಂತಾ ವಿದ್ಯಾರ್ಥಿಗಳು-ಪೋಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ ಜೂನ್ 20-25ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

ಫಲಿತಾಂಶ ಬಿಡುಗಡೆಯಾದ ಬಳಿಕ karresults.nic.in ಮತ್ತು pue.kar.nic.in. ವೆಬ್‍ಸೈಟ್‍ನಲ್ಲಿ ಲಭ್ಯವಿರಲಿದೆ. ಜೂನ್‌ 3 ಅಥವಾ 4ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಇದೇ ವಾರದಲ್ಲಿಯೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ. ಫಲಿತಾಂಶದ ಅಂತಿಮ ದಿನಾಂಕವನ್ನು ಮಂಡಳಿಯು ಶೀಘ್ರವೇ ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕಾರಿನಲ್ಲಿ 15 ಕೆಜಿ‌ ತೂಕದ ಆನೆ ದಂತ ಸಾಗಾಟ, ಮೂವರ ಬಂಧನ

2021-22ನೇ ಸಾಲಿನ PUC ಪರೀಕ್ಷೆಯನ್ನು ಏಪ್ರಿಲ್‌ 22ರಿಂದ ಮೇ 18ರವರೆಗೆ ನಡೆಸಲಾಗಿತ್ತು. ಹಿಜಾಬ್ ನಿಷೇಧದ ಬಳಿಕ ಪರೀಕ್ಷೆ ಬರೆಯಲು ಹಲವು ವಿದ್ಯಾರ್ಥಿಗಳು ನಿರಾಕರಿಸಿ ಪ್ರತಿಭಟನೆ ನಡೆಸಿದ್ದರು. ಬಳಿಕ ಯಾವುದೇ ತೊಂದರೆಯಿಲ್ಲದೆ ಶಾಂತಿಯುತವಾಗಿ ಪರೀಕ್ಷೆ ನಡೆದಿದ್ದವು. ಈ ಬಾರಿ ನಾವು ಶೀಘ್ರವೇ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದರು. ಅದರಂತೆ ಶಿಕ್ಷಣ ಇಲಾಖೆ ಪರೀಕ್ಷೆ ಮುಗಿದ ಕೂಡಲೇ ಮೌಲ್ಯಮಾಪನ ಕಾರ್ಯ ಪ್ರಾರಂಭಿಸಿತ್ತು. ಜೂ.15ರೊಳಗೆ ಫಲಿತಾಂಶ ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ, ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನ ಕಾರ್ಯದಲ್ಲಿ ಮೌಲ್ಯಮಾಪಕರು ಪಾಲ್ಗೊಳದ ಕಾರಣ ಫಲಿತಾಂಶ ವಿಳಂಭವಾಗಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಸಾಲು ಸಾಲು ರಜೆಯ ಕಾರಣ ಅಂದುಕೊಂಡ ಸಮಯಕ್ಕೆ ಮೌಲ್ಯಮಾಪನ ಕಾರ್ಯ ಮಾಡಲು ಸಾಧ್ಯವಾಗಿಲ್ಲವಂತೆ.  

ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದರು. ಒಟ್ಟು 6,00,519 ರೆಗ್ಯುಲರ್ ವಿದ್ಯಾರ್ಥಿಗಳು ಮತ್ತು 61,808 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಇದನ್ನೂ ಓದಿ: ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಮತದಾನ: ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News