Karnataka SSLC Result 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಗುರುವಾರ (ಮೇ 9) ಪ್ರಕಟಿಸಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. 


COMMERCIAL BREAK
SCROLL TO CONTINUE READING

ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ಸೂಚಿಸಿದಂತೆ ರಿಜಿಸ್ಟರ್ ಸಂಖ್ಯೆ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶಗಳನ್ನು ಚೆಕ್ ಮಾಡಬಹುದಾಗಿದೆ. 


ಇದನ್ನೂ ಓದಿ- Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ


2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು (SSLC Exams) ಮಾರ್ಚ್ 25 ರಿಂದ ಆಗಸ್ಟ್ 6 ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 4.41 ಲಕ್ಷ ಹುಡುಗರು  ಮತ್ತು 4.28 ಲಕ್ಷ ಹುಡುಗಿಯರು ಸೇರಿದಂತೆ ಒಟ್ಟು 8,69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 


ಇದನ್ನೂ ಓದಿ- Sarkari Naukri 2024: 10-12ನೇ ತರಗತಿ ಉತ್ತೀರ್ಣರಾದವರಿಗೆ ಸರ್ಕಾರದ ಈ ಇಲಾಖೆಯಲ್ಲಿ ನೇರ ನೇಮಕಾತಿ ಅವಕಾಶ


ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪರಿಶೀಲಿಸಲು ನೇರ ಲಿಂಕ್: 
kseab.karnataka.gov.in or karresults.nic.in or sslc.karnataka.gov.in ನೇರ ಲಿಂಕ್ ಗಳನ್ನು ಕ್ಲಿಕ್ ಮಾಡುವ ಮೂಲಕ ನೀವು ಸುಲಭ ಹಂತಗಳನ್ನು ಅನುಸರಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024ಅನ್ನು ಸುಲಭವಾಗಿ  ಚೆಕ್ ಮಾಡಬಹುದು.. 


ಕೆ‌ಎಸ್‌ಇಎಬಿ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪರಿಶೀಲಿಸಲು ಹಂತ-ಹಂತದ ಪ್ರಕ್ರಿಯೆ: 
* ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು (Karnataka SSLC Results) ಪೋಸ್ಟ್ ಮಾಡಲಾಗುವ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಒಂದಕ್ಕೆ ಭೈ ನೀಡಿ. 
ನೀವು ಈ ಕೆಳಗಿನ ಯಾವುದೇ URL ಗಳನ್ನು ಬಳಸಬಹುದು: kseab.karnataka.gov.in ಅಥವಾ karresults.nic.in ಅಥವಾ sslc.karnataka.gov.in


* ವೆಬ್‌ಸೈಟ್‌ನ ಮುಖಪುಟದಲ್ಲಿ "ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು 2024" ಆಯ್ಕೆಯ ಮೇಲೆ ಕ್ಲಿಕ್ ಮಾಡಿ. 


* ನಿಗದಿತ ಜಾಗದಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಅಗತ್ಯವಿರುವ ಮಾಹಿತಿಗಳನ್ನು ನಮೂದಿಸಿ. 


* ನಿಮ್ಮ ವಿವರಗಳನ್ನು ನಮೂದಿಸಿದ ನಂತರ, 'ಸಲ್ಲಿಸು' ಬಟನ್ ಕ್ಲಿಕ್ ಮಾಡಿ. 


* ನಂತರ ಸ್ಕ್ರೀನ್ ಮೇಲೆ ಫಲಿತಾಂಶ ಗೋಚರಿಸುತ್ತದೆ. 


* ಭವಿಷ್ಯದ ಉಪಯೋಗಕ್ಕಾಗಿ ನಿಮ್ಮ ಫಲಿತಾಂಶದ ನಕಲನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.