1000 ಗ್ರಾಮ ಆಡಳಿತ ಅಧಿಕಾರಿ ನೇಮಕ; ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ
KEA Village Administrative Officer 2024: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು. SC/ST, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಗ್ರಾಮ ಲೆಕ್ಕಿಗರ ಹುದ್ದೆಗೆ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಎಂಬ 2 ಹಂತಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 2ನೇ ಹಂತಕ್ಕೆ ಕರೆಯಲಾಗುವುದು. ನಂತರ ಆಕಾಂಕ್ಷಿಗಳ ಒಟ್ಟಾರೆ ಕಾರ್ಯಕ್ಷಮತೆಯ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಇದನ್ನೂ ಓದಿ: BJP ರಾಜ್ಯಾದ್ಯಕ್ಷ ವಿಜಯೇಂದ್ರನಿಗೆ ಕಾನೂನಿನ ಅರಿವಿಲ್ಲ : ರಾಮಲಿಂಗಾ ರೆಡ್ಡಿ
ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಹುದ್ದೆಯ ಹೆಸರು: ಗ್ರಾಮ ಆಡಳಿತ ಅಧಿಕಾರಿ (VA- ಗ್ರಾಮ ಲೆಕ್ಕಿಗ)
ಹುದ್ದೆಗಳ ಸಂಖ್ಯೆ: 1,000
ವೇತನ ಶ್ರೇಣಿ : ₹21,400-₹42,000
ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ (NPS)
ವಿದ್ಯಾರ್ಹತೆ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ CBSC/ICSE ನಡೆಸುವ 12ನೇ ತರಗತಿ/NIOS ನಡೆಸುವ HSC ಅರ್ಹತೆ ಪಡೆದಿರಬೇಕು. 3 ವರ್ಷಗಳ ಡಿಪ್ಲೋಮಾ, 2 ವರ್ಷಗಳ ITI ಕೋರ್ಸ್ ಅಥವಾ 2 ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೋಮಾ (JOC/JODC/JLDC) ಉತ್ತೀರ್ಣರಾಗಿರಬೇಕು.
ವಯೋಮಿತಿ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು. SC/ST, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 04-03-2024ರ ಬೆಳಗ್ಗೆ 11:00ರಿಂದ
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2024ರ ರಾತ್ರಿ 11-59ರವರೆಗೆ
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-04-2024
ಇದನ್ನೂ ಓದಿ: ನಾಡು-ನುಡಿ ಜಲ-ನೆಲ ವಿಚಾರ ಮಾತನಾಡಿದ್ರೆ ಸುಮ್ನೆ ಬಿಡಲ್ಲ : ಸಚಿವ ತಂಗಡಗಿ
ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಮತ್ತು SC/ST, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೊರತುಪಡಿಸಿ ಇತರೆ ಯಾವುದೇ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳಿಗಾಗಿ ಅರ್ಜಿ ನಮೂನೆಯು kandaya.karnataka.gov.in/ನಲ್ಲಿ ಲಭ್ಯವಿರುತ್ತದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾವಚಿತ್ರ ಮತ್ತು ಸಹಿಯೊಂದಿಗೆ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಜೊತೆಗೆ ಶುಲ್ಕವನ್ನು ಪಾವತಿಸಬೇಕು. ಅಧಿಸೂಚನೆಯನ್ನು ಬಿಡುಗಡೆ ಮಾಡಿದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಮಾರ್ಚ್ 4ರಂದು ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.