KCET 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ2023 (KCET)  ರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಪರೀಕ್ಷೆಯ ದಿನಾಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. 


COMMERCIAL BREAK
SCROLL TO CONTINUE READING

ಕೆಸಿಇಟಿ ಅನ್ನು ಮೇ 20 ಮತ್ತು 21, 2023 ರಂದು ನಡೆಸಲಾಗುತ್ತಿದೆ. ಕನ್ನಡ ಭಾಷಾ ಪರೀಕ್ಷೆಯು ಮೇ 22, 2023 ರಂದು ನಡೆಯಲಿದೆ. ಕೆಸಿಇಟಿ  ಪರೀಕ್ಷೆ - 2023 ಅನ್ನು ಆಫ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)  ಮಾದರಿಯಲ್ಲಿ ನಡೆಸಲಾಗುತ್ತದೆ.  ಪರೀಕ್ಷೆಯು ಒಟ್ಟು 3 ಗಂಟೆಗಳ ಕಾಲ ನಡೆಯಲಿದೆ.


ಇದನ್ನೂ ಓದಿ: ರಾಜ್ಯದ ಎಲ್ಲಾ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರ: ಎಎಪಿ ಅಭ್ಯರ್ಥಿ ಬಿ‌ಕೆ ಶಿವಪ್ಪ


ಕೆಸಿಇಟಿ  ( KCET) 2023 ರ ನೋಂದಣಿ ದಿನಾಂಕಗಳನ್ನು ಇನ್ನೂ ಪ್ರಕಟಿಸಿಲ್ಲ. ನೋಂದಣಿ ಲಿಂಕ್ ಅನ್ನು ಸಕ್ರಿಯಗೊಳಿಸಿದ ನಂತರ, ನೋಂದಾಯಿತ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಮತ್ತು ಸಲ್ಲಿಸಲು ಸಾಧ್ಯವಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ 
ಹಂತ 1: kea.kar.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
 ಹಂತ 2: ಮೊದಲ ಪುಟದಲ್ಲಿ  KCET 2023 ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ 
ಹಂತ 3:   ನೋಂದಾಯಿಸಿ ಮತ್ತು ಲಾಗಿನ್ ಆಗಿ 


ಇದನ್ನೂ ಓದಿ: 3673 ಪೌರಕಾರ್ಮಿಕರ ನೇರ ನೇಮಕಾತಿ ಅವ್ಯವಹಾರ ಆರೋಪ: ಬಿಬಿಎಂಪಿ ಸ್ಪಷ್ಟೀಕರಣ


 ಹಂತ 4:  ಅದೇ ವಿವರಗಳನ್ನು ಬಳಸಿಕೊಂಡು ಲಾಗಿನ್ ಮಾಡಿ ಮತ್ತು ಭರ್ತಿ ಮಾಡಿ
ಹಂತ 5. ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಪರೀಕ್ಷಾ ಶುಲ್ಕವನ್ನು ಪಾವತಿಸಿ
 ಹಂತ 6. ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ
 ಕಳೆದ ವರ್ಷ, ಒಟ್ಟು 2,16,559 ಅಭ್ಯರ್ಥಿಗಳು KCET 2022 ಗೆ ನೋಂದಾಯಿಸಿದ್ದರು, ಅದರಲ್ಲಿ 2,10,829 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.