ಬೆಂಗಳೂರು : ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ತೊಂದರೆ ಕೊಡ್ತಾನೆ ಇದೆ. ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್  ಸಿಗುತ್ತೋ ಸಿಗಲ್ವೋ ಅಂತ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. 


COMMERCIAL BREAK
SCROLL TO CONTINUE READING

ಸಿಇಟಿ ಪರೀಕ್ಷೆಗೆ ಇನ್ನೂ ಕೇವಲ 9 ದಿನ ಮಾತ್ರ ಬಾಕಿ ಉಳಿದಿದೆ. ಸಿಇಟಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಸಿಇಟಿ ಪರೀಕ್ಷೆ ಸಿಗೋದಿಲ್ಲ ಅನ್ನೂ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಈ ಕುರಿತು ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದ್ರೆ, ಪ್ರಾಧಿಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ಇದನ್ನೂ ಓದಿ : KCET 2022 ಪರೀಕ್ಷೆಗೆ ಹಿಜಾಬ್, ಮಂಗಲ ಸೂತ್ರ ಹಾಕೊಂಡು ಬಂದ್ರೆ No ಎಂಟ್ರಿ! 


 ಹಾಲ್ ಟಿಕೆಟ್ ಸಮಸ್ಯೆ ಒಂದಲ್ಲ, ಎರಡಲ್ಲ ಬರೋಬ್ಬರಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎದುರಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಆದ್ರೆ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಿಇಟಿ ವೆಬ್ ಸೈಟ್ ಸರ್ವರ್ ಸ್ಲೋ ಇರೋ ಕಾರಣ ವಿದ್ಯಾರ್ಥಿಗಳಿಗೆ ಈ ಆತಂಕ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಬೆಳಿಗ್ಗೆಯಿಂದ ಸಾವಿರಾರು ವಿದ್ಯಾರ್ಥಿಗಳು ಕೆಇಎಗೆ ದೂರು ಸಲ್ಲಿಸಿದ್ದಾರೆ. ಆದ್ರೆ, ವಿದ್ಯಾರ್ಥಿಗಳ ದೂರಿಗೆ ಕೆಇಎ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ