ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಫಲಿತಾಂಶ ಪ್ರಕಟಗೊಂಡಿದೆ. ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಈ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಕೆಇಎಗೆ ವಹಿಸಿತ್ತು. ಕೆ-ಸೆಟ್ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಕೆ-ಸೆಟ್ ಪರೀಕ್ಷೆಗೆ ಈ ಬಾರಿ ಒಟ್ಟು 1,17,303 ಅಭ್ಯರ್ಥಿಗಳು ನೋಂದಾಯಿಸಿದ್ದರು. 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದು 6,675 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. 3,398 ಜನ ಪುರಷರು ಹಾಗೂ 3,180 ಮಹಿಳೆಯರು ಹಾಗೂ 97 ತೃತೀಯ ಲಿಂಗಿಗಳು ಜೊತೆಗೆ 350 ಮಂದಿ ವಿಶೇಷ ಸಾಮರ್ಥ್ಯವುಳ್ಳವರು ಅರ್ಹತೆ ಪಡೆದಿದ್ದಾರೆ.
ಇದನ್ನೂ ಓದಿ: Daily GK Quiz: ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು?
ಕೆ-ಸೆಟ್ ಅರ್ಹತಾ ಪಟ್ಟಿಯನ್ನು ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಬಳಿಕ ಅರ್ಹ ಅಭ್ಯರ್ಥಿಗಳಿಗೆ ಇ-ಪ್ರಮಾಣ ಪತ್ರಗಳನ್ನು ನೀಡುತ್ತೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
KEA KSET 2024 ಫಲಿತಾಂಶವನ್ನು ಡೌನ್‌ಲೋಡ್ ಮಾಡಲು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು:-
ಹಂತ 1: ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ KSET ಫಲಿತಾಂಶದ ಮೇಲೆ ಕ್ಲಿಕ್ ಮಾಡಿ.
ಹಂತ 3: KSET ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಹಂತ 3: KSET ಫಲಿತಾಂಶ ವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಹಂತ 4: KSET ಫಲಿತಾಂಶ ವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: Daily GK Quiz: ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದ ಮೊದಲ ಮಹಿಳೆ ಯಾರು?
ಕನಿಷ್ಟ ಅರ್ಹತಾ ಅಂಕ:
KSET 2024 ರಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಟ ಅರ್ಹತಾ ಅಂಕ ಪೇಪರ್ 1 ಮತ್ತು 2 ರಲ್ಲಿ ಒಟ್ಟು 200 ಅಂಕಗಳಲ್ಲಿ 40%. Cat-I, IIA, IIB, IIIA, IIIB, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು (ST), ಮತ್ತು ವಿಶೇಷಚೇತನರು (PWD), ದೃಷ್ಟಿ ವಿಶೇಷಚೇತನರು (VH) ಮತ್ತು ದೈಹಿಕವಾಗಿ ವಿಶೇಷಚೇತನರು (PH) ಇವರಿಗೆ ಎರಡೂ ಪರೀಕ್ಷೆಗಳಲ್ಲಿ 200 ಅಂಕಗಳಲ್ಲಿ 35% ಅಂಕಗಳನ್ನು ಗಳಿಸಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.