KIOCL Recruitment 2024: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಕನ್ಸಲ್ಟೆಂಟ್​ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌ನ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ವಾಲಿಫೈಡ್​ ಕಂಪನಿ ಸೆಕ್ರೆಟರಿ(ACS) ಪೂರ್ಣಗೊಳಿಸಿರಬೇಕು.


ಇದನ್ನೂ ಓದಿDaily GK Quiz: ʼಭಾರತದ ನೈಟಿಂಗೇಲ್' ಎಂದು ಯಾರನ್ನು ಕರೆಯುತ್ತಾರೆ?


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹1,20,000


ಉದ್ಯೋಗದ ಸ್ಥಳ: ಬೆಂಗಳೂರು


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ


ಅರ್ಜಿ ಹಾಕೋದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ಜನರಲ್ ಮ್ಯಾನೇಜರ್ (HR), ಕಿಯೋಸ್ಕ್ ಲಿಮಿಟೆಡ್, 2ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-560034, ಕರ್ನಾಟಕ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಇದನ್ನೂ ಓದಿDaily GK Quiz: ಮಾನವ ದೇಹದಲ್ಲಿ ಎಷ್ಟು ಮೂಳೆಗಳಿವೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.