Konkan Railway: ಕೊಂಕಣ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ
Konkan Railway Recruitment 2024: ಸೀನಿಯರ್ ಸೆಕ್ಷನ್ ಇಂಜಿನಿಯರ್ ಮತ್ತು ಕಮರ್ಷಿಯಲ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸರಬೇಕು. ಇನ್ನುಳಿದ ಹುದ್ದೆಗಳಿಗೆ SSLC, ITI ಪೂರ್ಣಗೊಳಿಸಿರಬೇಕು.
Konkan Railway Recruitment 2024: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 190 ಟೆಕ್ನಿಷಿಯನ್ ಮತ್ತು ಪಾಯಿಂಟ್ಸ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆಗಳ ವಿವರ: ಸೀನಿಯರ್ ಸೆಕ್ಷನ್ ಇಂಜಿನಿಯರ್ 10, ಟೆಕ್ನಿಶಿಯನ್ 3-35, ಅಸಿಸ್ಟೆಂಟ್ ಲೋಕೊ ಪೈಲಟ್ 15, ಟ್ರಾಕ್ ಮೈನ್ಟೇನರ್ 35, ಸ್ಟೇಷನ್ ಮಾಸ್ಟರ್ 10, ಗೂಡ್ಸ್ ಟ್ರೈನ್ ಮ್ಯಾನೇಜರ್ 5, ಪಾಯಿಂಟ್ಸ್ ಮ್ಯಾನ್ 60, ಇಎಸ್ಟಿಎಂ 3-15 ಮತ್ತು ಕಮರ್ಷಿಯಲ್ ಸೂಪರ್ವೈಸರ್ 5 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಇದನ್ನೂ ಓದಿ: Daily GK Quiz: ಭಾರತದಲ್ಲಿ "ಸಿಟಿ ಆಫ್ ಜಾಯ್" ಎಂದು ಯಾವ ನಗರವನ್ನು ಕರೆಯಲಾಗುತ್ತದೆ?
ವಿದ್ಯಾರ್ಹತೆ: ಸೀನಿಯರ್ ಸೆಕ್ಷನ್ ಇಂಜಿನಿಯರ್ ಮತ್ತು ಕಮರ್ಷಿಯಲ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸರಬೇಕು. ಇನ್ನುಳಿದ ಹುದ್ದೆಗಳಿಗೆ SSLC, ITI ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 36 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ 885 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: Daily GK Quiz: ನೊಬೆಲ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಯಾರು?
ಸೆಪ್ಟೆಂಬರ್ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 6 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ konkanrailway.comಗೆ ಭೇಟಿ ನೀಡಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.