ಕೊಪ್ಪಳ ವಿವಿಗೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ಡಿ.19 ರವರೆಗೆ ವಿಸ್ತರಣೆ
2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಕೊನೆಯ ದಿನವನ್ನು ಡಿಸೆಂಬರ್ 19ರವರೆಗೆ ವಿಸ್ತರಿಸಲಾಗಿದೆ.
ಕೊಪ್ಪಳ: 2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಕೊನೆಯ ದಿನವನ್ನು ಡಿಸೆಂಬರ್ 19ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ಹಿಂದೆ 14 ಡಿಸೆಂಬರ್ 2023ರವರೆಗೆ ನಿಗದಿಪಡಿಸಲಾಗಿತ್ತು. ವಿದ್ಯಾರ್ಥಿಗಳು ಪ್ರವೇಶಾತಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.
ಈಗಾಗಲೇ ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಗಂಗಾವತಿಗೆ ಪ್ರವೇಶದ ಆದ್ಯತೆಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ.
ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿಯನ್ನು ಡಿ.19ರ ಸಂಜೆ 5 ರೊಳಗಡೆ ಕಡ್ಡಾಯವಾಗಿ ಕುಲಸಚಿವರು (ಆಡಳಿತ), ಕೊಪ್ಪಳ ವಿಶ್ವವಿದ್ಯಾಲಯ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್-583238 ಇವರ ಕಚೇರಿಗೆ ತಲುಪಿಸತಕ್ಕದ್ದು. ಒಂದು ವೇಳೆ ತಲುಪಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.