KPSC Recruitment 2022 : KPSC ಯಿಂದ `ಅಸಿಸ್ಟೆಂಟ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್` 30 ಹುದ್ದೆಗಳಿಗೆ ಅರ್ಜಿ!
ಕರ್ನಾಟಕ ಲೋಕಸೇವಾ ಆಯೋಗ (KPSC) ಸಹಾಯಕ ವಿದ್ಯುತ್ ಪರಿವೀಕ್ಷರ(Assistant Electrical Inspector) ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) ಸಹಾಯಕ ವಿದ್ಯುತ್ ಪರಿವೀಕ್ಷರ(Assistant Electrical Inspector) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.
ಹುದ್ದೆಗಳ ಹೆಸರು : ಸಹಾಯಕ ವಿದ್ಯುತ್ ಪರಿವೀಕ್ಷಕರು(Assistant Electrical Inspector)
ಒಟ್ಟು ಹುದ್ದೆಗಳ ಸಂಖ್ಯೆ: 30
ಇದನ್ನೂ ಓದಿ : SEBI Recruitment 2022 : SEBI ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಮಾಹಿತಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: ಜುಲೈ 25
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 23
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 24
ವಿದ್ಯಾರ್ಹತೆ
ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅನ್ನು ಭಾರತ ಸರ್ಕಾರದ ನಿಯಮಾನುಸಾರ ಸ್ಥಾಪಿತವಾದ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಗಳಲ್ಲಿ ಪಾಸ್ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಕೆಪಿಎಸ್‌ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.
ವೇತನ ವಿವರ : 43100-83900 ರೂ. ವರೆಗೆ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
35 ರೂ. ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.
ವಯೋಮಿತಿ
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ/ಎಸ್‌ಟಿ/ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.
ಇದನ್ನೂ ಓದಿ : NABARD Grade A Recruitment 2022 : NABARD ದಲ್ಲಿ 170 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ : ವಿವರಗಳಿಗೆ ಇಲ್ಲಿ ಓದಿ
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 3 ಹಂತಗಳು ಇರುತ್ತವೆ.
ಕರ್ನಾಟಕ ಲೋಕಸೇವಾ ಆಯೋಗ ವೆಬ್ ಸೈಟ್ : https://www.kpsc.kar.nic.in/index.html
1ನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್‌ಡೇಟ್
2ನೇ ಹಂತ : ಅಪ್ಲಿಕೇಶನ್ ಸಬ್‌ಮಿಷನ್
3ನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.