KPSC Recruitment 2024: ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 147 ಸೈಂಟಿಸ್ಟ್​-B, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: 12 ಸೈಂಟಿಸ್ಟ್-B, 1 ಆಂಥ್ರೋಪಾಲಜಿಸ್ಟ್​, 123 ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್, 4 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಮತ್ತು 7 ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇವೆ.


ವಿದ್ಯಾರ್ಹತೆ: ಸೈಂಟಿಸ್ಟ್-Bಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಆಂಥ್ರೋಪಾಲಜಿಸ್ಟ್‌ಗೆ ಸ್ನಾತಕೋತ್ತರ ಪದವಿ, ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್‌ಗೆ ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ ಡ್ರಿಲ್ಲಿಂಗ್/ಮೈನಿಂಗ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಸಿವಿಲ್ ಎಂಜಿನಿಯರಿಂಗ್​ನಲ್ಲಿ ಪದವಿ ಮತ್ತು ಅಸಿಸ್ಟೆಂಟ್ ಡೈರೆಕ್ಟರ್‌ಗೆ ಸಿಎಸ್‌ಇ/ಇಸಿಇ/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಕೆಮಿಕಲ್/ಮೆರೈನ್/ಪ್ರೊಡಕ್ಷನ್/ಇಂಡಸ್ಟ್ರಿಯಲ್/ಇನ್‌ಸ್ಟ್ರುಮೆಂಟೇಶನ್/ಸಿವಿಲ್ ಇಂಜಿನಿಯರಿಂಗ್/ಆರ್ಕಿಟೆಕ್ಚರ್/ಟೆಕ್ಸ್‌ಟೈಲ್ ಕೆಮಿಸ್ಟ್ರಿ/ಟೆಕ್ಸ್‌ಟೈಲ್ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು.


ಇದನ್ನೂ ಓದಿ: Weather Update: ದೇಶದಲ್ಲಿ ಕೆಲ ಭಾಗಗಳಲ್ಲಿ ಮುಂದುವರೆದ ಹೀಟ್‌ವೇವ್, ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಐಎಂಡಿ


ವಯೋಮಿತಿ: ಸೈಂಟಿಸ್ಟ್-Bಗೆ 40 ವರ್ಷ, ಆಂಥ್ರೋಪಾಲಜಿಸ್ಟ್‌ಗೆ 38 ವರ್ಷ, ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್‌ಗೆ 40 ವರ್ಷ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ 35 ವರ್ಷ ಮತ್ತು ಅಸಿಸ್ಟೆಂಟ್ ಡೈರೆಕ್ಟರ್‌ಗೆ 35 ವರ್ಷ


ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗೆ 3 ವರ್ಷ, SC/ST ಅಭ್ಯರ್ಥಿಗೆ 5 ವರ್ಷ ಮತ್ತು PwBD ಅಭ್ಯರ್ಥಿಗೆ 10 ವರ್ಷ 


ಅರ್ಜಿ ಶುಲ್ಕ: SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ, ಇತರ ಎಲ್ಲಾ ಅಭ್ಯರ್ಥಿಗಳಿಗೆ 25 ರೂ.ವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತ  


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು KPSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಮಾಡಬಹುದು.


ಇದನ್ನೂ ಓದಿ: Terrorist Trapped In Jammu Kashmir: ಪುಲ್ವಾಮಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಹತ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.