KPTCL Recruitment 2024: 10ನೇ ತರಗತಿ ಪಾಸಾದವರು ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ

KPTCL Recruitment 2024: KPTCLನಲ್ಲಿ ಖಾಲಿ ಇರುವ ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್‌ಮ್ಯಾನ್ ಸೇರಿದಂತೆ ಒಟ್ಟು 2,975 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 

Written by - Puttaraj K Alur | Last Updated : Oct 20, 2024, 11:18 PM IST
  • ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ
  • KPTCLನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
  • ಜೂನಿಯರ್ ಪವರ್‌ಮ್ಯಾನ್ 2,542 & 433 ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳ ನೇಮಕ
KPTCL Recruitment 2024: 10ನೇ ತರಗತಿ ಪಾಸಾದವರು ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿ title=
KPTCL Recruitment 2024

KPTCL Recruitment 2024: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(KPTCL)ದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಲಾಖೆಯು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ನೇಮಕಾತಿಯ ಮೂಲಕ ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಎಷ್ಟು ಹುದ್ದೆಗಳು?: KPTCLನಲ್ಲಿ ಖಾಲಿ ಇರುವ ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್‌ಮ್ಯಾನ್ ಸೇರಿದಂತೆ ಒಟ್ಟು 2,975 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ವಿವರ: ಜೂನಿಯರ್ ಪವರ್‌ಮ್ಯಾನ್ 2,542 ಮತ್ತು ಜೂನಿಯರ್ ಸ್ಟೇಷನ್ ಅಟೆಂಡೆಂಟ್ 433 ಹುದ್ದೆಗಳು ಖಾಲಿ ಇವೆ

ಇದನ್ನೂ ಓದಿ: ರಾಷ್ಟ್ರೀಯ ಮಹಿಳಾ ಆಯೋಗದ ನೂತನ ಮುಖ್ಯಸ್ಥೆಯಾಗಿ ವಿಜಯ ಕಿಶೋರ್ ರಹತ್ಕರ್ ನೇಮಕ

KPTCL ಹುದ್ದೆಯ ವಿವರಗಳು

ಇಲಾಖಾ ಹೆಸರು  ಸಾಮಾನ್ಯ ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳು ಒಟ್ಟು
ಕೆಪಿಟಿಸಿಎಲ್ 475  48 523
ಬೆಸ್ಕಾಂ 640 295 935
CESC ಮೈಸೂರು 270  39  309
ಹೆಸ್ಕಾಂ 500 60 560
ಮೆಸ್ಕಾಂ 415   34 449
GESCOM 100   99 199
ಒಟ್ಟು 2,400 575 2,975

ಶೈಕ್ಷಣಿಕ ಅರ್ಹತೆ: 10ನೇ ತರಗತಿ (SSLC) ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನವೆಂಬರ್ 20, 2024ರಂತೆ ಕನಿಷ್ಠ 18 ವರ್ಷಗಳಾಗಿರಬೇಕು. ಗರಿಷ್ಠ 35 ವರ್ಷಗಳನ್ನು ದಾಟಿರಬಾರದು.

ವಯೋಮಿತಿ ಸಡಿಲಿಕೆ: SC/ST/Cat-I ಅಭ್ಯರ್ಥಿಗಳಿಗೆ 5 ವರ್ಷ ಮತ್ತು Cat-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

ವೇತನ: ಮೊದಲ ವರ್ಷದ ತಿಂಗಳ ಸಂಬಳ: ₹17,000 ರಿಂದ ₹63,000, 2ನೇ ವರ್ಷದಿಂದ ತಿಂಗಳ ಸಂಬಳ: ₹19,000 ರಿಂದ ₹63,000 ಮತ್ತು 3ನೇ ವರ್ಷದಿಂದ ತಿಂಗಳ ಸಂಬಳ: ₹21,000 ರಿಂದ ₹63,000 ವೇತನವಿರುತ್ತದೆ.

ಅರ್ಜಿ ಶುಲ್ಕ: SC/ST ಅಭ್ಯರ್ಥಿಗಳಿಗೆ 378 ರೂ., ಸಾಮಾನ್ಯ/CAT-I/2A/2B/3A & 3B ಅಭ್ಯರ್ಥಿಗಳಿಗೆ 614 ರೂ. ಮತ್ತು PWD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. 

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ (ಅಂಕಗಳು), ಸಹಿಷ್ಣುತೆ ಪರೀಕ್ಷೆ, ದಾಖಲೆಗಳ ಪರಿಶೀಲನೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 21-10-2024
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024
* ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25 ನವೆಂಬರ್ 2024

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ kptcl.karnataka.gov.in ಭೇಟಿ ನೀಡಬೇಕು. 

ಇದನ್ನೂ ಓದಿ: ಮೆಟ್ರೊ ನಿಲ್ದಾಣದ ಬಳಿ ಚಿರತೆ..! ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News