ಬೆಂಗಳೂರು: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್‍ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯುಟಿ ಚೀಫ್​ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಎಂಸಿಎ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!


ವೇತನ: ಮಾಸಿಕ ₹40,900-₹78,200


ಉದ್ಯೋಗದ ಸ್ಥಳ: ಬೆಂಗಳೂರು


ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್​ ಮೂಲಕ 2,000 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಸವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಕರ್ನಾಟಕ ರಾಜ್ಯ ಸಹಕಾರ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್, ನಂ. 132, ಕೆ.ಎಚ್. ರಸ್ತೆ ಬೆಂಗಳೂರು - 560027


ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಇದನ್ನೂ ಓದಿ: TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.