ಕಟ್ಟಡ ಕಾರ್ಮಿಕ ಮಕ್ಕಳಿಗೆ ಲ್ಯಾಪ್‌ಟಾಪ್: ಸೆ.22ರೊಳಗೆ ಅರ್ಜಿ ಸಲ್ಲಿಸಿ

  ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು ತಿಳಿಸಿದ್ದಾರೆ.

Written by - Manjunath N | Last Updated : Sep 20, 2023, 11:05 PM IST
  • ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು,
  • ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ.
  • ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.
ಕಟ್ಟಡ ಕಾರ್ಮಿಕ ಮಕ್ಕಳಿಗೆ ಲ್ಯಾಪ್‌ಟಾಪ್: ಸೆ.22ರೊಳಗೆ ಅರ್ಜಿ ಸಲ್ಲಿಸಿ title=
ಸಾಂದರ್ಭಿಕ ಚಿತ್ರ

ಕೊಪ್ಪಳ:  ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ..!

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ಕಾರ್ಮಿಕ ಅಧಿಕಾರಿ, ಕೊಪ್ಪಳ ಉಪ ವಿಭಾಗ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ, ಕೊಪ್ಪಳ ಉಪವಿಭಾಗ, ಕೊಪ್ಪಳ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ.

ಇದನ್ನೂ ಓದಿ: ರಾಣಿ ಮಹರಾಣಿ, ನಂಜುಂಡಿ ಕಲ್ಯಾಣ ಸಿನಿಮಾನ ತುಂಬಾ ಸರಿ ನೋಡಿದಿನಿ

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು, ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ. ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಜಿಲ್ಲೆ ಹಾಗೂ ದೂ.ಸಂ: 08539-295404 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News