ಬೆಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಸಕ್ರಿಯವಾಗಿದ್ದ ಜೆಬಿಎಫ್ ಕಂಪನಿಯು ಆರ್ಥಿಕ ತೊಂದರೆಗೆ ಸಿಲುಕಿದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿರುವ 34 ಉದ್ಯೋಗಿಗಳಿಗೆ 'ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್'(ಗೈಲ್)ನಲ್ಲಿ ಉದ್ಯೋಗ ಕೊಡಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರಕಾರದೊಂದಿಗೆ ನಿರಂತರವಾಗಿ ವ್ಯವಹರಿಸಲಾಗುತ್ತಿದೆ. ಜತೆಗೆ, ಗೈಲ್ ಸಂಸ್ಥೆಯ ಉನ್ನತಾಧಿಕಾರಿಗಳೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಸಂಕಷ್ಟಕ್ಕೆ ಸಿಲುಕಿರುವವರು ಜೆಬಿಎಫ್ ಕಂಪನಿಗೆ ಜಮೀನು ನೀಡಿ, ನಿರ್ವಸಿತರಾಗಿರುವವರು. ಸರಕಾರದ ನಿಯಮಗಳಂತೆ ಆ ಕಂಪನಿಯು ಇಂಥ 115 ಮಂದಿಗೆ ಉದ್ಯೋಗ ನೀಡಬೇಕಿತ್ತು. 2012ರಲ್ಲಿ 81 ಜನರನ್ನು ಉದ್ಯೋಗಕ್ಕೆ ತೆಗೆದುಕೊಂಡ ಕಂಪನಿಯು 2017ರಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ಬಳಿಕ ಎನ್.ಸಿ.ಎಲ್.ಟಿ. ಪ್ರಕ್ರಿಯೆಯಡಿಯಲ್ಲಿ ಜೆಬಿಎಫ್ ಕಂಪನಿಯನ್ನು ಕೇಂದ್ರ ಸರಕಾರದ 'ಗೈಲ್'ಗೆ ವಹಿಸಲಾಯಿತು. ಆ ಸಂಸ್ಥೆಯು ಇವರಿಗೆ 2023ರ ಮಾರ್ಚ್ ತನಕ ವೇತನ ನೀಡಿದೆ. ಆದರೆ, ನಂತರ ಅದು ಲಿಖಿತ ಮತ್ತು ಮೌಖಿಕ ಪರೀಕ್ಷೆಗಳನ್ನು ನಡೆಸಿ, ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿತು. ಇದರಿಂದ ಸಮಸ್ಯೆ ಉದ್ಭವಿಸಿದೆ ಎಂದು ಅವರು ವಿವರಿಸಿದರು.


ಇದನ್ನೂ ಓದಿ- ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?: ಸಿಎಂ ಸಿದ್ದರಾಮಯ್ಯ


ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, 2023ರ ನ.7ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ, ಇವರನ್ನೆಲ್ಲ ಉದ್ಯೋಗದಲ್ಲಿ ಮುಂದುವರಿಸಲು ಅಗತ್ಯ ಅನುಮೋದನೆ ಪಡೆದುಕೊಳ್ಳುವಂತೆ ಜಿಎಂಪಿಎಲ್ ಸಂಸ್ಥೆಯ ಸಿಇಒ ಅವರಿಗೆ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.


ಮಿಕ್ಕಂತೆ, ಮಂಗಳೂರು ತಾಲ್ಲೂಕಿನ ಇಪಿಎಪಿ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ 104.28 ಎಕರೆ ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಇದು ಕೇಂದ್ರ ಮತ್ತು ರಾಜ್ಯ ಸರಕಾರಗಳ ವತಿಯಿಂದ 50:50ರ ಅನುಪಾತದಲ್ಲಿ ನಡೆಯುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಚಿವರು ಉತ್ತರಿಸಿದರು.


ಇದನ್ನೂ ಓದಿ- ಹಳಿಯಾಳ ಆರ್‌ಸೆಟಿ ಸಂಸ್ಥೆ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ


ಅಭಿನಂದನೆ ಸಲ್ಲಿಸಿದ ಭಂಡಾರಿ:
ಕೈಗಾರಿಕಾ ಸಚಿವ ಪಾಟೀಲ ಅವರು ದಾವೋಸ್ ನ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿ, ರಾಜ್ಯಕ್ಕೆ  ಸುಮಾರು ₹23000 ಕೋಟಿ ಬಂಡವಾಳ ತರುವ ಪ್ರಯತ್ನ ಮಾಡಿದ್ದು ಅದಕ್ಕೆ ಅವರನ್ನು ಅಭಿನಂದಿಸುತ್ತೇನೆ ಎಂದು ಭಂಡಾರಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.