ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.

Last Updated : Feb 27, 2024, 08:13 PM IST
  • ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 1,07,500/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 93,900/- (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಗಳಾಗಿರುತ್ತದೆ.
  • ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000/- ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ
  • ಮೊತ್ತವನ್ನು ವಿಧ್ಯಾರ್ಥಿಯು ಪಧವೀಧರನಾದ ಮತ್ತು ವಿಧ್ಯಾರ್ಥಿನಿಯು ಪಧವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.
 ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ title=

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಿನಾಂಕ 01-01-2025 ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಅಂದರೆ (ದಿನಾಂಕ 02-01-2012 ರಿಂದ 01-07-2013 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪರೀಕ್ಷೆಗೆ ಅರ್ಹರಿರುತ್ತಾರೆ.

ಇದನ್ನೂ ಓದಿ: 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ.

ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 1,07,500/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 93,900/- (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000/- ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ (incl in annual fee). ಮೊತ್ತವನ್ನು ವಿಧ್ಯಾರ್ಥಿಯು ಪಧವೀಧರನಾದ ಮತ್ತು ವಿಧ್ಯಾರ್ಥಿನಿಯು ಪಧವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.

ಅರ್ಜಿ ನಮೂನೆ ಪಡೆಯುವ ವಿಧಾನ:

ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.

ಆನ್‍ಲೈನ್ ಪಾವತಿ:

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/- ಇದ್ದು, ಆನ್‍ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು.

ವೆಬ್‍ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.

ಇದನ್ನೂ ಓದಿ: ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆ : ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿಯಿಂದ ವಿಶೇಷ ಸೂಚನೆ

ಬೇಡಿಕೆ ಕರಡು ಕಳುಹಿಸುವ ವಿಧಾನ:

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು. ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರೀಲ್ 15 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.

ಬೇಕಾದ ದಾಖಲೆಗಳು:

ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 5 ಪಾಸಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42/- ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ.

ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಈ ರಾಜ್ಯದ ವಾಸಸ್ಥಾನ ದೃಡೀಕರಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News