ಬೆಂಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನದಡಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಸಂಬಂಧಪಟ್ಟಂತೆ, ಕರ್ನಾಟಕದಾದ್ಯಂತ ನಕಲಿ ಸಂಸ್ಥೆಗಳು ಪತ್ತೆಯಾಗಿರುವುದರಿಂದ 2022-23ನೇ ಸಾಲಿನ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವು ವಿತರಿಸುವುದಕ್ಕೆ ವಿಳಂಬವಾಗಿರುತ್ತದೆ. ಆದ್ದರಿಂದ ಈ ಸಾಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ಆದಷ್ಟು ಬೇಗ ಪಾವತಿಸಬೇಕಾಗಿದ್ದು, 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಅವಶ್ಯಕವಾಗಿರುತ್ತದೆ.
ಇದನ್ನೂ ಓದಿ: NEET UG 2023 Seat Round 1 ಫಲಿತಾಂಶ ಇಂದು ಪ್ರಕಟ: ರಿಸಲ್ಟ್ ಹೀಗೆ ಪರಿಶೀಲಿಸಿ
ಈಗಾಗಲೇ ಸಂಸ್ಥೆಯ ಮುಖ್ಯಸ್ಥರು, ಸಂಸ್ಥೆಯ ನೋಡಲ್ ಅಧಿಕಾರಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಸಿದ್ದು, 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಕೂಡ ಆಗಸ್ಟ್ 20ರೊಳಗೆ ಹತ್ತಿರದ ತಾಲೂಕು ಬಯೋಮೆಟ್ರಿಕ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಅತಿ ಅವಶ್ಯಕವಾಗಿರುತ್ತದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ವಂಚಿತರಾಗುತ್ತಾರೆ ಎಂದು ಈ ಮೂಲಕ ತಿಳಿಸಿದೆ.
ಇದನ್ನೂ ಓದಿ: 10 ದಿನಗಳವರೆಗೆ ಮಥುರಾದ ಕೃಷ್ಣ ಜನ್ಮಭೂಮಿ ಬಳಿ ಯಾವುದೇ ಕಟ್ಟಡ ಧ್ವಂಸಗೊಳಿಸುವಂತಿಲ್ಲ- ಸುಪ್ರೀಂ ಆದೇಶ
ವಿದ್ಯಾರ್ಥಿಗಳು ಬಯೋಮೆಟ್ರಿಕ್ ದೃಢೀಕರಣ ಮಾಡಿಸಿಕೊಳ್ಳುವುದು ಆಗಸ್ಟ್ 20 ಕೊನೆಯ ದಿನವಾಗಿದೆ. ಸಂಸ್ಥೆಯ ನೋಡಲ್ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸುವ ಆಗಸ್ಟ್ 23 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.