NCBS Recruitment 2024: ಬೆಂಗಳೂರಿನಲ್ಲಿ ಕ್ಲರ್ಕ್​ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿ

NCBS Recruitment 2024: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, 7 ಕ್ಲರ್ಕ್ (ಸಾಮಾನ್ಯ) ಮತ್ತು 2 ಕ್ಲರ್ಕ್ (OBC) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.​

Written by - Puttaraj K Alur | Last Updated : Mar 29, 2024, 07:18 PM IST
  • ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ
  • ಒಟ್ಟು 10 ಕ್ಲರ್ಕ್​, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ
NCBS Recruitment 2024: ಬೆಂಗಳೂರಿನಲ್ಲಿ ಕ್ಲರ್ಕ್​ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿ   title=
NCBS Recruitment 2024

NCBS Recruitment 2024: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಕ್ಲರ್ಕ್​, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 

ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Lok Sabha Elections: 14 ವರ್ಷಗಳ ಬಳಿಕ ಮತ್ತೆ ರಾಜಕೀಯಕ್ಕೆ ಮರಳಿದ ಗೋವಿಂದ

ಹುದ್ದೆಯ ವಿವರ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿಯಿರುವ 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, 7 ಕ್ಲರ್ಕ್ (ಸಾಮಾನ್ಯ) ಮತ್ತು 2 ಕ್ಲರ್ಕ್ (OBC) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.​

ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್‌ಗೆ 33 ವರ್ಷ, ಕ್ಲರ್ಕ್(ಸಾಮಾನ್ಯ)ಗೆ 28 ವರ್ಷ ಮತ್ತು ಕ್ಲರ್ಕ್(OBC)ಗೆ 31 ವರ್ಷ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್‌ಗೆ ಮಾಸಿಕ ₹35,400, ಕ್ಲರ್ಕ್(ಸಾಮಾನ್ಯ)ಗೆ ಮಾಸಿಕ ₹21,700 ಮತ್ತು ಕ್ಲರ್ಕ್(OBC)ಗೆ ಮಾಸಿಕ ₹21,700 

ಉದ್ಯೋಗದ ಸ್ಥಳ: ಬೆಂಗಳೂರು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್​ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ 29/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್​ 31, 2024

ಇದನ್ನೂ ಓದಿ: Daily GK Quiz: ವಿಶ್ವದ ಅತ್ಯಂತ ಬಿಸಿಯಾದ ಖಂಡ ಯಾವುದು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News