ಕರಾಮುವಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ 45 ದಿನಗಳ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ: ಕ್ರಿಕೆಟ್ ಕಾಶಿ ಲಾರ್ಡ್ಸ್ ಗ್ರೌಂಡ್ ಇಟ್ಟಿಗೆ ಮೇಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರು..!
ಆಸಕ್ತರು ಜೂ.22ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ: ಆರ್ ಆರ್ ಆರ್ ಮತ್ತು ಕೆಜಿಎಫ್ 2 ನಡುವೆ ಯಾವುದು ಫೇವರಿಟ್? ಎಂದು ಕೇಳಿದ್ದಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತೇ ?
ಹೆಚ್ಚಿನ ಮಾಹಿತಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.