NIMHANS Recruitment 2024: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (SRF) ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಎಸ್ಸಿ, ಎಂ.ಫಿಲ್​ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಬೆಂಗಳೂರು


ವೇತನ: ಮಾಸಿಕ ₹42,000


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ docravi20@yahoo.comಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ NIMHANSನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ಇದನ್ನೂ ಓದಿ: H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ