National Institute of Mental Health and Neuro Sciences Job Alert: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರೋಗ್ರಾಮ್​ ಕೋ-ಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಮಾರ್ಚ್​ 15 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಲು ಸಿದ್ಧರಾದ ಈಶ್ವರಪ್ಪ


ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಿಯಾಟ್ರಿಕ್​ ಸೋಷಿಯಲ್ ವರ್ಕ್​/ಸೈಕಾಲಜಿಯಲ್ಲಿ ಎಂ.ಫಿಲ್, ಸೋಷಿಯಲ್ ವರ್ಕ್​​ನಲ್ಲಿ ಸ್ನಾತಕೋತ್ತರ ಪದವಿ, ಸೈಕಾಲಜಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅನುಭವ: ಅಭ್ಯರ್ಥಿಗಳು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಆತ್ಮಹತ್ಯೆ ತಡೆಗಟ್ಟುವ ಕ್ಷೇತ್ರದಲ್ಲಿ ಸಂಶೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.


ವೇತನ: ಮಾಸಿಕ ₹45,000


ಉದ್ಯೋಗದ ಸ್ಥಳ: ರಾಮನಗರ


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಸಂದರ್ಶನ ನಡೆಯುವ ಸ್ಥಳ: ಬೋರ್ಡ್ ರೂಮ್, 4ನೇ ಮಹಡಿ, NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್ ಬೆಂಗಳೂರು-29


ಇದನ್ನೂ ಓದಿ:  ಕೇವಲ 9 ಸೀಟ್‌ಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಕಾಂಗ್ರೆಸ್‌ ಮಾರಾಟ ಮಾಡಿದೆ: ಬಿಜೆಪಿ ಆರೋಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.