ಉತ್ತರ ಪ್ರದೇಶದ ನೋಯ್ಡಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಕನ್ಸಲ್ಟೆಂಟ್ (ಐಟಿ), ಸೀನಿಯರ್ ಎಕ್ಸಿಕ್ಯೂಟಿವ್ ಆಫೀಸರ್ (ಐಟಿ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಗ್‌ಬಾಸ್‌ ಕಾಡಲ್ಲಿ ನವಯುಗದ ಮಾನವರು : ಇದೆಲ್ಲಾ ಬೇಕಿತ್ತಾ ನಿಮ್ಗೆ ..!


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಟೆಕ್/ಬಿ.ಸಿ.ಎ/ಎಂ.ಟೆಕ್/ಎಂಸಿಎ ಅಥವಾ ಹುದ್ದೆಗೆ ಅನುಗುಣವಾಗಿ ಸಂಬಂಧಪಟ್ಟ ವಿಶೇಷತೆಯಲ್ಲಿ ತತ್ಸಮಾನ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ಕೆಲಸದಲ್ಲಿ ಕನಿಷ್ಠ ಮೂರರಿಂದ ಐದು ವರ್ಷಗಳ ಅನುಭವ ಹೊಂದಿರಬೇಕು.


ಇದನ್ನೂ ಓದಿ: Team India: ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರವಿ ಶಾಸ್ತ್ರಿ!


ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಬಿಡುಗಡೆಯಾದ 21 ದಿನಗಳಲ್ಲಿ (ಡಿಸೆಂಬರ್ 10, 2022) ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಮಯದಲ್ಲಿ ರೂ.250 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟಿಂಗ್, ಕೌಶಲ್ಯ ಪರೀಕ್ಷೆ/ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ರೂ.36,300 ರಿಂದ ರೂ.51,000 ವೇತನವನ್ನು ನೀಡಲಾಗುತ್ತದೆ. ಇತರ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.