Job Alert: ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 50,000 ಸಂಬಳ!

NIT Karnataka Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್​ಸ್ಟ್ರಕ್ಷನ್​ ಟೆಕ್ನಾಲಜಿ & ಮ್ಯಾನೇಜ್​ಮೆಂಟ್​ನಲ್ಲಿ ಸ್ನಾತಕೋತ್ತರ ಪದವಿ, ಕನ್​ಸ್ಟ್ರಕ್ಷನ್​ ಮ್ಯಾನೇಜ್​​ಮೆಂಟ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Feb 11, 2024, 10:16 PM IST
  • ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲಿಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು
Job Alert: ಅಸಿಸ್ಟೆಂಟ್ ಲೆಕ್ಚರರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 50,000 ಸಂಬಳ! title=
Teaching Jobs

ಮಂಗಳೂರು: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕನ್​ಸ್ಟ್ರಕ್ಷನ್​ ಟೆಕ್ನಾಲಜಿ & ಮ್ಯಾನೇಜ್​ಮೆಂಟ್​ನಲ್ಲಿ ಸ್ನಾತಕೋತ್ತರ ಪದವಿ, ಕನ್​ಸ್ಟ್ರಕ್ಷನ್​ ಮ್ಯಾನೇಜ್​​ಮೆಂಟ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಮಧ್ಯಪ್ರದೇಶದ ಜಬುವಾದಲ್ಲಿ ಪ್ರಧಾನಿ ರೋಡ್‌ಶೋ : 7550ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹40,000- ₹50,000

ಉದ್ಯೋಗದ ಸ್ಥಳ: ಸುರತ್ಕಲ್

ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hodcivil@nitk.edu.inಗೆ ಕಳುಹಿಸಬೇಕು.

ಸಂದರ್ಶನ ನಡೆಯುವ ಸ್ಥಳ: ಸಿವಿಲ್ ಇಂಜಿನಿಯರಿಂಗ್ ವಿಭಾಗ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಮಂಗಳೂರು-575025

ಇದನ್ನೂ ಓದಿ: ನವದೆಹಲಿಯಲ್ಲಿ ಇಂದಿನಿಂದ ಫೆ.18 ರವೆರೆಗೆ ನಡೆಯಲಿದೆ 51ನೇ ಆವೃತ್ತಿಯ ವಿಶ್ವ ಪುಸ್ತಕ ಮೇಳ 2024

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News