ಬೆಂಗಳೂರು: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!


ಶೈಕ್ಷಣಿಕ ಅರ್ಹತೆ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹31,000


ಉದ್ಯೋಗದ ಸ್ಥಳ: ಸುರತ್ಕಲ್


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡಾ.ಬಬ್ಲೂ ಚೌಧರಿ, ಸಹಾಯಕ ಪ್ರಾಧ್ಯಾಪಕರು, ಸಿವಿಲ್ ಎಂಜಿನಿಯರಿಂಗ್ ವಿಭಾಗ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, ಪಿ.ಒ.ಶ್ರೀನಿವಾಸನಗರ ಮಂಗಳೂರು – 575025


ಇದನ್ನೂ ಓದಿ: TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.